ETV Bharat / state

ಕಡಬ: ಒಂದೂವರೆ ವರ್ಷದಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

ಸಂತ್ರಸ್ತೆಯ ಮನೆಗೆ ಬರುತ್ತಿದ್ದ ಆರೋಪಿ ಆಕೆಯ ಮೇಲೆ ಅತ್ಯಾಚಾರ ನಡೆಸುತ್ತಿದ್ದನಂತೆ. ಈ ಬೆಳವಣಿಗೆ ಕಳೆದ ಒಂದೂವರೆ ವರ್ಷದಿಂದ ನಡೆದುಕೊಂಡು ಬಂದರೂ ಆಕೆ ಹೆದರಿಕೊಂಡು ಯಾರಿಗೂ ಹೇಳಿರಲಿಲ್ಲ.

author img

By

Published : Nov 11, 2021, 5:48 PM IST

Updated : Nov 11, 2021, 6:37 PM IST

ಒಂದೂವರೆ ವರ್ಷದಿಂದ ಅತ್ಯಾಚಾರ
ಒಂದೂವರೆ ವರ್ಷದಿಂದ ಅತ್ಯಾಚಾರ

ಕಡಬ: ತಾಲೂಕಿನ ಕೋಡಿಂಬಾಳ ಗ್ರಾಮದಲ್ಲಿ (Kodimbala Village) ಅಪ್ರಾಪ್ತೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ (Sexual harassment) ಎಸಗಿದ ಆರೋಪದಡಿ ಬಾಲಕಿಯ ಸಂಬಂಧಿಕನನ್ನು ಪೊಕ್ಸೊ ಕಾಯ್ದೆಯಡಿ (Pocso Act) ಪೊಲೀಸರು ಬಂಧಿಸಿದ್ದಾರೆ.

ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ ರಮೇಶ್ ಎಂಬಾತ ತನ್ನ ಸಂಬಂಧಿಕರಾಗಿರುವ ಅಪ್ರಾಪ್ತೆಯನ್ನು ಕಳೆದ ಒಂದೂವರೆ ವರ್ಷದಿಂದ ಲೈಂಗಿಕವಾಗಿ ಬಳಸಿಕೊಂಡಿದ್ದು, ಇದೀಗ ಆಕೆ ಗರ್ಭವತಿಯಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿ ರಮೇಶನನ್ನು ಕಡಬ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿದ್ದಾರೆ. 2020ರ ಏಪ್ರಿಲ್ ತಿಂಗಳಿನಿಂದ ರಮೇಶ್ ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಗರ್ಭವತಿಯಾದ ಬಗ್ಗೆ ಬಾಲಕಿ ಯಾರಿಗೂ ಮಾಹಿತಿ ನೀಡಿರಲಿಲ್ಲ. ಆಕೆ ಅಸ್ವಸ್ಥಗೊಂಡಿದ್ದು, ಈ ಸಂಬಂಧ ತಪಾಸಣೆಗಾಗಿ ತನ್ನ ಅಜ್ಜಿಯೊಂದಿಗೆ ಕಡಬ ಸಮುದಾಯ ಆಸ್ಪತ್ರೆಗೆ (Kadaba Community Hospital) ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಗರ್ಭಿಣಿಯಾಗಿರುವ ವಿಚಾರ ವೈದ್ಯರಿಂದ ತಿಳಿದ ಬಳಿಕ ಹೆಚ್ಚಿನ ಪರೀಕ್ಷೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ (Lady Goschen Hospital, Mangalore) ಆಕೆಯನ್ನು ಕರೆದೊಯ್ಯಲಾಯಿತು. ಅಲ್ಲಿ ಪರೀಕ್ಷೆ ನಡೆಸಿದಾಗ ಬಾಲಕಿ ಒಂದೂವರೆ ತಿಂಗಳ ಗರ್ಭಿಣಿ ಎಂಬುದು ದೃಢಪಟ್ಟಿದೆ.

Last Updated : Nov 11, 2021, 6:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.