ಬಂಟ್ವಾಳ: ವೈದ್ಯನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾಯಕ್ ಎಂಬಾತನನ್ನು ಬಂಧಿಸಲಾಗಿದೆ.
14 ವರ್ಷದ ಬಾಲಕಿ ಮೇಲೆ ವೈದ್ಯ ಅನುಷ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿ ಆತನ ಕಾರಿನಲ್ಲಿ ಸಂತ್ರಸ್ತೆಯನ್ನು ಮನೆಯ ಕಡೆಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಕರಣ ತನಿಖೆ ನಡೆಸಿದ ವಿಟ್ಲ ಪೊಲೀಸರು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿದ್ದ ಈ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಆಲಮಟ್ಟಿಯ 18 ಗೇಟ್‌ಗಳ ಮೂಲಕ ನೀರು ಬಿಡುಗಡೆ; ಹೆಚ್ಚಿದ ಪ್ರವಾಹ ಭೀತಿ