ETV Bharat / state

ಮಂಗಳೂರಲ್ಲಿ ಎರಡು ಪ್ರತ್ಯೇಕ ಪ್ರಕರಣ: ಗಾಂಜಾ ಚರಸ್ ಮಾರಾಟದಲ್ಲಿ ತೊಡಗಿದ್ದ ನಾಲ್ವರ ಬಂಧನ: ಅಪಾರ ಮೌಲ್ಯದ ವಸ್ತು ವಶ - ಬೃಹತ್ ಪ್ರಮಾಣದ ಗಾಂಜಾ ಸಾಗಣೆ

ಮಂಗಳೂರಿನಲ್ಲಿ ಗಾಂಜಾ ಚರಸ್ ಮಾರಾಟದಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳ ಬಂಧನ- ಎರಡು ಪ್ರತ್ಯೇಕ ಪ್ರಕರಣ ಭೇದಿಸಿದ ಸೆನ್ ಠಾಣಾ ಪೊಲೀಸರು, ಆರೋಪಿಗಳಿಂದ ಗಾಂಜಾ ಚರಸ್​ ಕಾರು ಮೊಬೈಲ್ ವಶ.

accused were involved in the sale of ganja charas
ಗಾಂಜಾ ಚರಸ್ ಮಾರಾಟದಲ್ಲಿ ತೊಡಗಿದ್ದ ಆರೋಪಿಗಳು
author img

By

Published : Jan 13, 2023, 6:20 PM IST

ಮಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಗಾಂಜಾದಿಂದ ತಯಾರಿಸಿದ ಚರಸ್ ಅನ್ನು ಮಾರಾಟ ಮಾಡುತ್ತಿರುವ ಎರಡು ಪ್ರತ್ಯೇಕ ಪ್ರಕರಣಗಳನ್ನು ಪತ್ತೆ ಹಚ್ಚಿದ ಮಂಗಳೂರು ಪೊಲೀಸರು ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ತಾಲೂಕಿನ ಕಾರ್ಕಳದ ಬಜಗೋಳಿ ನಿವಾಸಿ ಸುಕೇತ್ ಕಾವಾ ಅಲಿಯಾಸ್ ಚುಕ್ಕಿ(33), ಉಡುಪಿ ತಾಲೂಕಿನ ಕಾರ್ಕಳದ ಪುಲ್ಕೇರಿ ನಿವಾಸಿ ಸುನಿಲ್(32), ತಮಿಳುನಾಡಿನ ಕೊಯಮತ್ತೂರು ನಿವಾಸಿ ಅರವಿಂದ ಕೆ. (24) ಮತ್ತು ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ವಿಜಯ ಕುಮಾರ್ ಶೆಟ್ಟಿ (24) ಬಂಧಿತ ಆರೋಪಿಗಳು.

ಮೊದಲನೆ ಪ್ರಕರಣದಲ್ಲಿ ಹಿಮಾಚಲ ಪ್ರದೇಶದಿಂದ ತಂದು ನಗರದಲ್ಲಿ ಮಾರಾಟ ಮಾಡಲೆತ್ನಿಸುತ್ತಿದ್ದ ಸುಕೇತ್ ಕಾವಾ ಅಲಿಯಾಸ್ ಚುಕ್ಕಿ, ಸುನಿಲ್, ಅರವಿಂದ ಕೆ. ಎಂಬುವರನ್ನು ಮಂಗಳೂರು ಸೆನ್ ಠಾಣಾ ಪೊಲೀಸರು ಬಂಧಿಸಿ ಚರಸ್ ಸೇರಿದಂತೆ 8 ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಹಿಮಾಚಲ ಪ್ರದೇಶದಿಂದ ಗಾಂಜಾ ಸಾಗಣೆ: ಇವರಲ್ಲಿ ಸುಕೇತ್ ಕಾವಾ ಹಾಗೂ ಇನ್ನಿಬ್ಬರು ಆರೋಪಿಗಳು ಟ್ರೆಕ್ಕಿಂಗ್ ಗೆಂದು ಹಿಮಾಚಲ ಪ್ರದೇಶಕ್ಕೆ ಹೋಗಿದ್ದರು. ಅಲ್ಲಿ ತಾನು ಪ್ರವಾಸಿ ಗೈಡ್ ಎಂದು ಸ್ಥಳೀಯರನ್ನು ನಂಬಿಸಿದ್ದಾರೆ. ಬಳಿಕ ಹಿಮಾಚಲ ಪ್ರದೇಶದ ಕುಲುವಿನ ಪಾರ್ವತಿ ವ್ಯಾಲಿ ಎಂಬ 300 ಹಳ್ಳಿಗಳಲ್ಲಿ ನೈಸರ್ಗಿಕವಾಗಿ ಬೆಳೆಯುವ ಗಾಂಜಾ ಹಾಗೂ ಗಾಂಜಾದಿಂದ ತಯಾರು ಮಾಡುವ ಚರಸ್ ಅನ್ನು ಅಲ್ಲಿನ ಹಳ್ಳಿಗರಿಂದ ಖರೀದಿಸಿದ್ದಾರೆ.

ಬಳಿಕ ಅವರು ಅಲ್ಲಿಂದ ರೈಲಿನಲ್ಲಿ ಯಾರಿಗೂ ಅನುಮಾನ ಬಾರದಂತೆ ಸಾಗಣೆ ಮಾಡಿದ್ದಾರೆ. ಬಳಿಕ ಅದನ್ನು ಡ್ರಗ್ ಪೆಡ್ಲರ್ ಗಳ ಮೂಲಕ‌ ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಪೂರೈಸಿ ಹಣ ಮಾಡುವ ದಂಧೆಯಲ್ಲಿ ನಿರತರಾಗಿದ್ದರು. ಈ ಮಾಹಿತಿ ಅರಿತ ಸೆನ್ ಪೊಲೀಸರು ದಾಳಿ ನಡೆಸಿ ಈ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 500 ಗ್ರಾಂ ಚರಸ್, ಒಂದು ಕೆ ಜಿ ಗಾಂಜಾ, ಗಾಂಜಾ ಸಾಗಾಟಕ್ಕೆ ಬಳಸಿದ ರಿಟ್ಝ್ ಕಾರು ಹಾಗೂ ಮೂರು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 8 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯೇಕ ಪ್ರಕರಣ 10 ಕೆಜಿ ಗಾಂಜಾ ವಶ: ಮತ್ತೊಂದು ಪ್ರಕರಣದಲ್ಲಿ ನಗರದ ಕುಂಟಿಕಾನ ಕ್ರಾಸ್ ಬಳಿ ಬೃಹತ್ ಪ್ರಮಾಣದ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆತನಿಂದ 10 ಕೆ.ಜಿ. ಗಾಂಜಾ ವಸ್ತುವನ್ನೂ ವಶಕ್ಕೆ ಪಡೆದಿದ್ದಾರೆ.

ಆಂಧ್ರಪ್ರದೇಶದಿಂದ ಗಾಂಜಾ ಸಾಗಣೆ: ಜ.13ರಂದು ಬೆಳಗ್ಗೆ ಕುಂಟಿಕಾನ ಕ್ರಾಸ್‌ ಬಳಿಯಲ್ಲಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಈತನ ಬಗ್ಗೆ ಸುಳಿವು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ ಕಾರನ್ನು ಪತ್ತೆ ಹಚ್ಚಿದ್ದಾರೆ. ಆರೋಪಿ ವಿಜಯ ಕುಮಾರ್ ಶೆಟ್ಟಿ ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಕಾರಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದರು. ಈ ವೇಳೆ, ಸಿಸಿಬಿ ಪೊಲೀಸರು ಈತನನ್ನು ಬಂಧಿಸಿ, ಸಾಗಣೆಗೆ ಉಪಯೋಗಿಸಿದ್ದ ಕಾರು ಸಹಿತ 10 ಕೆ ಜಿ 200 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈತನಿಂದ 2.55 ಲಕ್ಷ ರೂ. ಮೌಲ್ಯದ 10 ಕೆ ಜಿ 200 ಗ್ರಾಂ ಗಾಂಜಾ, ಮಾರುತಿ ಸ್ವಿಪ್ಟ್ ಕಾರು, ಒಂದು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಈ ಕುರಿತಾಗಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂಓದಿ:ಮಂಗಳೂರು ಗಾಂಜಾ ಪ್ರಕರಣ: ವೈದ್ಯ ಸೇರಿ ಮತ್ತಿಬ್ಬರು ಅರೆಸ್ಟ್, ಬಂಧಿತರ ಸಂಖ್ಯೆ 15ಕ್ಕೇರಿಕೆ

etv play button

ETV Bharat Logo

Copyright © 2025 Ushodaya Enterprises Pvt. Ltd., All Rights Reserved.