ETV Bharat / state

ಕಾಣಿಯೂರು ಬಳಿ ಬಟ್ಟೆ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ: ಆರು ಜನ ಬಂಧನ - ಬಟ್ಟೆ ವ್ಯಾಪಾರಿಗಳ ಮೇಲಿನ ಹಲ್ಲೆ ಪ್ರಕರಣ

ಬಟ್ಟೆ ವ್ಯಾಪಾರಿಗಳ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಲಾಗಿದೆ ಎಂದು ಎಸ್​ಪಿ ತಿಳಿಸಿದ್ದಾರೆ.

ಕಾಣಿಯೂರು ಬಳಿ ಬಟ್ಟೆ ವ್ಯಾಪಾರಿಗಳ ಮೇಲೆ ಹಲ್ಲೆ

author img

By

Published : Oct 23, 2022, 8:41 PM IST

ಕಡಬ (ದಕ್ಷಿಣ ಕನ್ನಡ): ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಲ್ಪಾಡಿ ಎಂಬಲ್ಲಿ ಇಬ್ಬರು ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ಬಂಧಿತರನ್ನು ಪುನಿತ್, ರಾಜು, ಪ್ರಸಾದ್, ಕಿಶೋರ್, ಭವಿತ್, ರಂಜಿತ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 144, 341, 504, 323, 324, 427, 149ರಡಿ ಪ್ರಕರಣ ದಾಖಲಾಗಿದೆ.‌

ಈಗಾಗಲೇ ಹಲ್ಲೆಗೊಳಗಾದ ರಮೀಝುದ್ದೀನ್ ಮತ್ತು ರಫೀಕ್ ವಿರುದ್ಧ ಪರಿಶಿಷ್ಟ ಜಾತಿ, ಪಂಗಡ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 448, 354, 341ರಡಿ ಪ್ರಕರಣ ದಾಖಲಿಸಲಾಗಿದೆ. ಈ ಇಬ್ಬರು ಆರೋಪಿಗಳು ಆಸ್ಪತ್ರೆಯಲ್ಲಿದ್ದು, ಪೊಲೀಸ್ ನಿಗಾದಲ್ಲಿದ್ದಾರೆ ಎಂದು ಎಸ್​ಪಿ ತಿಳಿಸಿದ್ದಾರೆ.

ಏನಿದು ಘಟನೆ: ಹಲ್ಲೆಗೊಳಗಾದ ಆರೋಪಿಗಳ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಅತ್ಯಾಚಾರ ಯತ್ನ ದೂರು ದಾಖಲಿಸಿದ್ದರೆ, ಇನ್ನೊಂದೆಡೆ ಈ ಆರೋಪಿಗಳು ತಮ್ಮ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದರು. ಅತ್ಯಾಚಾರ ಯತ್ನ ಆರೋಪಿಗಳ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

(ಓದಿ: ಕಂಬಳಿ ಮಾರುವ ನೆಪದಲ್ಲಿ ಬಂದು ಮಹಿಳೆ ಅತ್ಯಾಚಾರಕ್ಕೆ ಯತ್ನ ಆರೋಪ)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.