ಬಂಟ್ವಾಳ: ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದ ತಂಡದ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಲ್ಲಡ್ಕದ ಪಳನೀರು ಬಳಿ ಈ ಘಟನೆ ನಡೆದಿದ್ದು, ಬಾಳ್ತಿಲ ಗ್ರಾಮ ನಿವಾಸಿ ಉದಯ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ. ವೀರಕಂಭ ನಿವಾಸಿ ಶ್ರೀನಿವಾಸ, ಕಲ್ಲಡ್ಕ ನಿವಾಸಿ ಪ್ರಶಾಂತ್ ಹಾಗೂ ಇತರರ ತಂಡ ಕೈ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
ಹತ್ತಿರದ ಮನೆಯೊಂದರಲ್ಲಿ ಮೊಬೈಲ್ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.