ETV Bharat / state

ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಂದು ಹತ್ಯೆ: ಯುವಕನ ಬರ್ಬರ ಕೊಲೆ - Murder in Mangaluru

ಮಂಗಳೂರಲ್ಲಿ ಮತ್ತೋರ್ವ ಯುವಕನ ಹತ್ಯೆಯಾಗಿದೆ.

ಫಾಝಿಲ್
ಫಾಝಿಲ್
author img

By

Published : Jul 28, 2022, 9:32 PM IST

Updated : Jul 29, 2022, 6:31 AM IST

ಮಂಗಳೂರು: ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಲಾಗಿದೆ. ಸಾಮಾನ್ಯ ಜನರ ಓಡಾಟದ ಮಧ್ಯೆಯೇ ದುಷ್ಕರ್ಮಿಗಳು ದಾಳಿ ಮಾಡಿದ್ದು, ಸಿಸಿಟಿವಿಯಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳ್ಳಾರೆಗೆ ಭೇಟಿ ನೀಡಿ ಮೃತ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ.

ಯುವಕನ ಬರ್ಬರ ಕೊಲೆ

ಸುರತ್ಕಲ್​ನ ಮಂಗಳಪೇಟೆ ನಿವಾಸಿ ಫಾಜಿಲ್ ಕೊಲೆಯಾದ ಯುವಕ. ಇವರು ಸುರತ್ಕಲ್​ನಲ್ಲಿ ಜವಳಿ ಅಂಗಡಿಯ ಮುಂಭಾಗದಲ್ಲಿ ನಿಂತುಕೊಂಡಿದ್ದ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪಾಜಿಲ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಫಾಜಿಲ್ ಮೃತಪಟ್ಟಿದ್ದಾನೆ.

ಫಾಝಿಲ್ ಹಲ್ಲೆ ನಡೆದ ಸ್ಥಳ
ಫಾಝಿಲ್ ಹಲ್ಲೆ ನಡೆದ ಸ್ಥಳ

ಓದಿ: ಪ್ರವೀಣ್ ನೆಟ್ಟಾರು ಮನೆಗೆ ಸಿಎಂ ಭೇಟಿ.. ಕುಟುಂಬಕ್ಕೆ ರೂ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರ

Last Updated : Jul 29, 2022, 6:31 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.