ETV Bharat / state

ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಯತ್ನ...ಪ್ರಕರಣ ದಾಖಲು

ಕರ್ತವ್ಯನಿರತ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಇಂದು ಬೆಳಗ್ಗೆ ಬಂಟ್ವಾಳದ ಕುಕ್ಕಿಪಾಡಿ ಗ್ರಾಮದಲ್ಲಿ ಕೂಡಾ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆ ಯತ್ನ ನಡೆಸಲಾಗಿದೆ ಎಂಬ ದೂರು ಕೇಳಿಬಂದಿದೆ.

Asha worker
ಆಶಾ ಕಾರ್ಯಕರ್ತೆ
author img

By

Published : May 11, 2020, 8:47 PM IST

Updated : May 11, 2020, 9:44 PM IST

ಬಂಟ್ವಾಳ(ದಕ್ಷಿಣ ಕನ್ನಡ): ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ಪ್ರಕರಣಗಳು ಆಗ್ಗಾಗ್ಗೆ ವರದಿಯಾಗುತ್ತಿದೆ. ಇದೀಗ ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದಲ್ಲಿ ಕೂಡಾ ಕರ್ತವ್ಯನಿರತ ಆಶಾ ಕಾರ್ಯಕರ್ತೆಯೊಬ್ಬರನ್ನು ನಿಂದಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.

ಕುಕ್ಕಿಪ್ಪಾಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆ ಪುಷ್ಪಲತಾ ಎಂಬುವವರು ಸ್ಥಳೀಯ ಮನೆಯೊಂದರ ಬಳಿ ಜನರು ಒಟ್ಟಿಗೆ ಸೇರಿದ್ದನ್ನು ಕಂಡು ಪ್ರಶ್ನಿಸಲು ತೆರಳಿದ್ದಾರೆ. ಈ ವೇಳೆ ಆ ಮನೆಯವರು ಪುಷ್ಪಾ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ, ಆಕೆಯ ಮೇಲೆ ಹಲ್ಲೆಗೆ ಕೂಡಾ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪುಷ್ಪಲತಾ ಅವರು ಪುಂಜಾಲ ಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣದ ಬಗ್ಗೆ ತುರ್ತು ಸಭೆ ನಡೆಸಿದ ಗ್ರಾ.ಪಂ. ಅಧ್ಯಕ್ಷರಾದ ದಿನೇಶ ಸುಂದರ ಶಾಂತಿ ನೇತೃತ್ವದ ಟಾಸ್ಕ್​​​​ಪೋರ್ಸ್​ ಸಮಿತಿ ತನಿಖೆ ನಡೆಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ. ಸಭೆ ವೇಳೆ ಪಿಡಿಓ ತುಳಸಿ. ಪಿ, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Last Updated : May 11, 2020, 9:44 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.