ಮಂಗಳೂರು: ನಗರದ ಕೊಡಿಯಾಲ್ ಬೈಲ್ನಲ್ಲಿರುವ ಡಯಟ್ ಶಿಕ್ಷಣ ಸಂಸ್ಥೆಗೆ ನುಗ್ಗಿ ಮೂವರು ಮಹಿಳೆಯರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿ ಮಾನಸಿಕ ಅಸ್ವಸ್ಥತನಾಗಿದ್ದು, ಶಿಕ್ಷಕಿ ತನಗೆ ಮಾಟ ಮಾಡಿದ್ದಾರೆಂದು ಗ್ರಹಿಸಿ ಹಲ್ಲೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಆರೋಪಿ ಕುಂದಾಪುರದ ನವೀನ್ (31) ಎಂಬಾತ ಅದೇ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ. ಈತ ಅದೇ ಶಿಕ್ಷಣ ಸಂಸ್ಥೆಯ ಶಿಕ್ಷಕಿಯೋರ್ವರು ತನ್ನ ಮೇಲೆ ಗೌರವ ಭಾವನೆ ಇಲ್ಲ. ಇವರು ಬೇರೊಬ್ಬ ವಿದ್ಯಾರ್ಥಿಯೊಂದಿಗೆ ಸೇರಿಕೊಂಡು ತನ್ನ ಮೇಲೆ ಮಾಟ ಮಾಡಿದ್ದಾರೆ ಎಂದು ನಂಬಿದ್ದನು. ಈ ಹಿನ್ನೆಲೆಯಲ್ಲಿ ಶಿಕ್ಷಕಿ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಡಯಟ್ ಶಿಕ್ಷಣ ಸಂಸ್ಥೆಗೆ ತೆರಳಿ ಮಾಟ ಮಾಡಿದ ವಿಚಾರವಾಗಿ ಶಿಕ್ಷಕಿಯನ್ನು ವಿಚಾರಿಸಿದ್ದಾನೆ. ಅದಕ್ಕೆ ಶಿಕ್ಷಕಿ ಇಲ್ಲವೆಂದು ತಿಳಿದಾಗ ಕೋಪದಿಂದ ಆತ ತಾನು ತಂದಿದ್ದ ಮಚ್ಚಿನಿಂದ ಮೂವರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾನೆ. ಆರೋಪಿ ಗಂಭೀರವಾದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಎಂದು ವೈದ್ಯರು ತಿಳಿಸಿರುವುದಾಗಿ ಶಶಿಕುಮಾರ್ ಹೇಳಿದರು.
ಇದನ್ನೂ ಓದಿ: ಮಂಗಳೂರು: ಗಿಫ್ಟ್ ಕೊಡುವ ನೆಪದಲ್ಲಿ ಮಹಿಳೆಗೆ ತಲವಾರಿನಿಂದ ಹಲ್ಲೆ, ಮೂವರಿಗೆ ಗಂಭೀರ ಗಾಯ