ಉಪ್ಪಿನಂಗಡಿ: ಇಲ್ಲಿನ ಸಮೀಪದ ಹಳೆಗೇಟ್ ಎಂಬಲ್ಲಿ ಮೂವರ ಮೇಲೆ ಸೋಮವಾರ ಸಂಜೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹಳೆಗೇಟ್ ಬಳಿ ಮೀನಿನ ವ್ಯಾಪಾರ ನಡೆಸುತ್ತಿದ್ದ ಮೂವರ ಮೇಲೆ ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಅಶೋಕ್, ಮೋಹನ್, ಮಹೇಶ್ ಎಂಬವರು ಹಲ್ಲೆಗೊಳಗಾದವರು. ಗಾಯಾಳುಗಳಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಭಾನುವಾರ ರಾತ್ರಿಯೂ ಉಪ್ಪಿನಂಗಡಿ ಸಮೀಪದ ಇಳಂತಿಳ ಗ್ರಾಮದ ಅಂಡೆತಡ್ಕ ಎಂಬಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿತ್ತು. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕಿವುಡ, ಮೂಕ ಮಹಿಳೆ ಮೇಲೆ ಕಾಮುಕನಿಂದ ನಿರಂತರ ಅತ್ಯಾಚಾರ