ETV Bharat / state

ಪವರ್ ಮ್ಯಾನ್​ಗಳಿಬ್ಬರ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ - ವಿದ್ಯುತ್ ಶುಲ್ಕ

ಬಿಲ್ ಪಾವತಿಸದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಹಿನ್ನೆಲೆ ಪವರ್ ಮ್ಯಾನ್​ಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್​ನಲ್ಲಿ ಗುರುವಾರ ರಾತ್ರಿ ಸಂಭವಿಸಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

attack on Powerman
ಪವರ್ ಮ್ಯಾನ್​ಗಳಿಬ್ಬರ ಮೇಲೆ ಹಲ್ಲೆ ಪ್ರಕರಣ
author img

By

Published : Sep 24, 2022, 7:09 AM IST

ಬೆಳ್ತಂಗಡಿ(ದಕ್ಷಿಣ ಕನ್ನಡ): ಬಿಲ್ ಬಾಕಿ ಕಾರಣ ಮನೆಯೊಂದರ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪವರ್ ಮ್ಯಾನ್​ಗಳಿಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಕೊಕ್ಕಡದ ಪವರ್​ಮ್ಯಾನ್​ಗಳಾದ ದುಂಡಪ್ಪ ಜಂಗಪ್ಪಗೋಳ ಮತ್ತು ಉಮೇಶ್ ಎಂಬುವರ ಮೇಲೆ ವಿದ್ಯುತ್ ಬಿಲ್ ವಿಚಾರವಾಗಿ ಧರ್ಮಸ್ಥಳದ ಅಜುಕುರಿ ನಿವಾಸಿ, ಲಾರಿ ಮಾಲೀಕನಾದ ರಿಜೇಶ್(41) ಎಂಬುವರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 353, 323, 504, 506ರ ಅಡಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇದೀಗ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದ ವಿವರ: ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವರ ಹೆಸರಿನ ವಿದ್ಯುತ್ ಶುಲ್ಕ 3,530 ರೂ. ಇದ್ದು, ಇದನ್ನು ಪಾವತಿಸದ ಹಿನ್ನೆಲೆ ಸೆಪ್ಟೆಂಬರ್ 19ರಂದು ಮಧ್ಯಾಹ್ನ ಪವರ್​ಮ್ಯಾನ್ ಉಮೇಶ್ ಅವರು ಕಾಂತು ಪೂಜಾರಿ ಅವರ ಮನೆಗೆ ತೆರಳಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.

ಪವರ್ ಮ್ಯಾನ್​ಗಳಿಬ್ಬರ ಮೇಲೆ ಹಲ್ಲೆ

ಈ ಸಂದರ್ಭದಲ್ಲಿ ಮನೆ ಅಳಿಯ ಇರಲಿಲ್ಲ. ಗೂಡ್ಸ್ ಲಾರಿ ಚಾಲಕ ರಿಜೀಶ್​ಗೆ ಮನೆಯವರು ಫೋನ್ ಮಾಡಿ ಪವರ್ ಮ್ಯಾನ್​ ಜೊತೆ ಮಾತನಾಡಲು ಹೇಳಿದ್ದಾರೆ. ಫೋನಿನಲ್ಲಿ ಪವರ್ ಮ್ಯಾನ್ ಉಮೇಶ್ ಅವರಿಗೆ ಕೊಲೆ ಬೆದರಿಕೆಯನ್ನು ಅವರು ಹಾಕಿದ್ದಾರೆ. ಇದನ್ನು ಉಮೇಶ್ ಅವರು ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಬಗ್ಗೆ ಕೊಕ್ಕಡ ಜೆಇ ಕೃಷ್ಣೇಗೌಡ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಲ್ ಕಟ್ಟದ ಕಾರಣ ಕರೆಂಟ್ ಕಟ್: ಬೆಳ್ತಂಗಡಿ ಪವರ್​ಮ್ಯಾನ್​ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ

ಸೆಪ್ಟೆಂಬರ್ 22ರಂದು ದಿ. ಕಾಂತು ಪೂಜಾರಿ ಮನೆಯವರು ವಿದ್ಯುತ್ ಶುಲ್ಕ ಪಾವತಿಸಿ, ಮರು ಸಂಪರ್ಕವನ್ನು ನೀಡುವಂತೆ ಆದೇಶವನ್ನು ಮೆಸ್ಕಾಂ ಕಚೇರಿಗೆ ತಲುಪಿಸಿದ್ದಾರೆ. ಆ ಪ್ರಕಾರ, ಪವರ್ ಮ್ಯಾನ್ ಉಮೇಶ್ ಅವರು ದಿ.ಕಾಂತು ಪೂಜಾರಿ ಅವರ ಮನೆಗೆ ಮರು ಸಂಪರ್ಕವನ್ನು ನೀಡಿ ಬಂದಿದ್ದಾರೆ. ಗುರುವಾರ ಸಂಜೆ ಕರ್ತವ್ಯ ಮುಗಿಸಿ ರಾತ್ರಿ ಕೊಕ್ಕಡ ಜಂಕ್ಷನ್​ನಲ್ಲಿ ಉಮೇಶ್ ಹಾಗೂ ಅವರ ಸಹೋದ್ಯೋಗಿಗಳು ದಿನಸಿ ಸಾಮಗ್ರಿಗಳನ್ನು ಖರೀದಿಸುವ ವೇಳೆ ಲಾರಿ ಚಾಲಕರಾಗಿರುವ ರಿಜೇಶ್, ಉಮೇಶ್ ಯಾರೆಂದು ಪವರ್ ಮ್ಯಾನ್​ಗಳನ್ನು ಪ್ರಶ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳದಲ್ಲೇ ಇದ್ದ ಉಮೇಶ್, ತಾವೇ ಎಂದು ಪರಿಚಯಿಸಿಕೊಂಡಿದ್ದಾರೆ. ಬಳಿಕ ಅವಾಚ್ಯ ಶಬ್ದಗಳಿಂದ ಉಮೇಶ್ ಅವರನ್ನು ನಿಂದಿಸಿದ ರಿಜೇಶ್, ಹಲ್ಲೆಗೆ ಮುಂದಾದರು. ಆಗ ಸಹೋದ್ಯೋಗಿಯಾದ ಉಪ್ಪಾರಪಳಿಕೆಯ ಪವರ್ ಮ್ಯಾನ್ ದುಂಡಪ್ಪ ಮಧ್ಯಪ್ರವೇಶಿಸಿ, ಮಾತುಕತೆ ನಡೆಸಿ ಸಮಾಧಾನಪಡಿಸಿದ್ದಾರೆ.

ಪರಿಸ್ಥಿತಿ ಶಾಂತಗೊಳಿಸಿ, ತೆರಳುವಾಗ ಪಕ್ಕದಲ್ಲಿ ಇದ್ದ ಸೋಡಾ ಬಾಟಲಿಯಿಂದ ರಿಜೀಶ್ ಅವರು, ದುಂಡಪ್ಪ ಅವರ ತಲೆಗೆ ಬಲವಾಗಿ ಹೊಡೆದಿದ್ದಾರೆ. ಈ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.