ETV Bharat / state

ಉಪ್ಪಿನಂಗಡಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ! - ಉಪ್ಪಿನಂಗಡಿ ರೇಪ್​ ಕೇಸ್​

ಅಪ್ರಾಪ್ತ ಬಾಲಕಿಯನ್ನು ಕಾಮುಕನೋರ್ವ ಕಾರಿನಲ್ಲಿ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

uppinangady
ಲೈಂಗಿಕ ದೌರ್ಜನ್ಯ
author img

By

Published : Jul 18, 2021, 2:09 PM IST

ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕೂರಿಸಿ ವ್ಯಕ್ತಿವೋರ್ವ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬಾಲಕಿಯ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಇಳಂತಿಲ ಪ್ರದೇಶದ ಬಾಲಕಿಯನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊಕ್ಕಡದ ನಿವಾಸಿಯೊಬ್ಬ ಕಾರಿನಲ್ಲಿ ಬಂದು ತನ್ನ ಕಾರಿನಲ್ಲಿ ಬರಬೇಕು ಎಂದು ಒತ್ತಾಯಿಸಿದ್ದಾನೆ. ಈ ಸಂದರ್ಭದಲ್ಲಿ ಬಾಲಕಿ ಒಪ್ಪದೇ ಇದ್ದಾಗ ಆಕೆಯನ್ನು ಬೆದರಿಸಿ ಬಲವಂತವಾಗಿ ಕಾರಿನಲ್ಲಿ ಉಪ್ಪಿನಂಗಡಿ ಕಡೆಗೆ ಕರೆದುಕೊಂಡು ಹೋಗಿ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಹಿಂಸೆ ನೀಡಲು ಯತ್ನಿಸಿದ್ದಾನೆ.

ಈ ಸಂದರ್ಭದಲ್ಲಿ ಭಯಗೊಂಡ ಬಾಲಕಿ ಕಿರುಚಾಡಿದ್ದಾಳೆ. ಈ ಪರಿಣಾಮ ಆತ ಬಾಲಕಿಯನ್ನು ಪುನಃ ಮನೆಗೆ ಕರೆತಂದು ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ಯಾರಿಗೂ ಕೂಡ ಈ ಬಗ್ಗೆ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.