ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಆಟೋ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಆಟೋ ಚಾಲಕ ಮತ್ತು ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ.
ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಎಸ್.ಐ.ರಾಮ ನಾಯ್ಕ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.