ಮಂಗಳೂರು: ನಿಂತಿದ್ದ ಟಿಪ್ಪರ್ವೊಂದಕ್ಕೆ ನಿಯಂತ್ರಣ ತಪ್ಪಿ ರಿಕ್ಷಾ ಚಾಲಕ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಂಗಳೂರು ತಾಲೂಕಿನ ವಳಚಿಲ್ ನಿವಾಸಿ ಸಲೀಂ ಮೃತಪಟ್ಟವರು. ಸಲೀಂ ಮಂಗಳೂರು ಮೀನುಗಾರಿಕಾ ಬಂದರಿನಿಂದ ಮೀನುಗಳನ್ನು ಮಾರಾಟ ಮಾಡಲು ತಮ್ಮದೇ ರಿಕ್ಷಾದಲ್ಲಿ ಕೊಂಡೊಯ್ಯುತ್ತಿದ್ದರು. ಮಂಗಳೂರಿನ ಪಡೀಲ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಿಕ್ಷಾ ನಿಯಂತ್ರಣ ತಪ್ಪಿ ನಿಂತಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಈ ಕುರಿತು ಮಂಗಳೂರು ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.