ETV Bharat / state

ಕೋವಿಡ್​ ಹಾಗೂ ಇತರೆ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸೆ; ಡಿಸಿ ರಾಜೇಂದ್ರ ಕುಮಾರ್

ಕೊರೊನಾ ಸೋಂಕಿನ ಸಮುದಾಯ ಹರಡುವಿಕೆಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸೋಂಕಿತರಿಗೆ ಹಾಗೂ ಇತರೆ ರೋಗಿಗಳಿಗೆ ಚಿಕಿತ್ಸೆಗಳನ್ನು ಪ್ರತ್ಯೇಕವಾಗಿ ನೀಡುವಂತೆ ಎಚ್ಚರವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಕುಮಾರ್​ ಹೇಳಿದರು.

Awareness on Corona virus
ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಕುಮಾರ್
author img

By

Published : Aug 5, 2020, 5:41 PM IST

ದಕ್ಷಿಣ ಕನ್ನಡ: ಕೊರೊನಾ ಸೋಂಕು ಎಲ್ಲೆಡೆ ಹರಡಲು ಆರಂಭಗೊಂಡಿದೆ. ಇದರ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಕೋವಿಡ್​-19 ಹಾಗೂ ಇತರೆ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಕುಮಾರ್

ಇಲ್ಲಿನ ಪುತ್ತೂರಿನಲ್ಲಿ ಜಾಗೃತಿ ಕುರಿತು ಹಮ್ಮಿಕೊಂಡ ಸಭೆಯ ನಂತರ ಮಾತನಾಡಿದ ಅವರು, ಪ್ರತೀ ದಿನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ವಿಚಾರದಲ್ಲಿ ಸಮುದಾಯದ ಸಹಭಾಗಿತ್ವದ ಅವಶ್ಯಕತೆ ಇದೆ. ಸ್ಥಳೀಯರ ಆರೋಗ್ಯ ಸಮಸ್ಯೆ ದೃಷ್ಟಿಯಿಂದ ಸಮುದಾಯದ ಸಹಭಾಗಿತ್ವ ಅವಶ್ಯ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಳೀಯ ಶಿಕ್ಷಕರನ್ನೂ ಒಳಗೊಂಡ ಗುಂಪುಗಳನ್ನು ಮಾಡಲಾಗುವುದು. ತಾಲೂಕು ಆಸ್ಪತ್ರೆಯ ಸಮಸ್ಯೆಗಳ ಕುರಿತು ತಾಲೂಕು ಆರೋಗ್ಯಾಧಿಕಾರಿ ಜೊತೆ ಚರ್ಚಿಸಲಾಗುವುದು. ತಾಂತ್ರಿಕ ತೊಂದರೆಗಳಿದ್ದರೆ ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.