ಉಳ್ಳಾಲ: ಸಾಯಿ ಫ್ರೆಂಡ್ಸ್ ಅಸೈಗೋಳಿ ಮತ್ತು ಕೊಣಾಜೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಶೌಕತ್ ಆಲಿ ನೇತೃತ್ವದಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ ಕಾರ್ಯಕ್ರಮವು ಅಸೈಗೋಳಿ ಯುವಕ ಮಂಡಳದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅಸೈಗೋಳಿ ಕೊರಗಜ್ಜ ಗುಳಿಗಜ್ಜ ಸೇವಾ ಸಮಿತಿಯ ಅಧ್ಯಕ್ಷ ಸಂಕಪ್ಪ ಕರ್ಕೇರ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಕೊಣಾಜೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಶೌಕತ್ ಆಲಿ ಮಾತನಾಡಿ, ಜನಸಾಮಾನ್ಯರ ಆರೋಗ್ಯದ ಕಾಳಜಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಸಾರ್ವಜನಿಕರೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು. ಎಲ್ಲರಿಗೂ ಆರೋಗ್ಯ ಭಾಗ್ಯ ಒದಗಲಿ, ಆಯುಷ್ಮಾನ್ ಕಾರ್ಡ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡ ಸಾಯಿ ಫ್ರೆಂಡ್ಸ್ ಅಸೈಗೋಳಿ ಇದರ ಅಧ್ಯಕ್ಷ ಮತ್ತು ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಎಂದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಹ್ಮಾನ್ ಕೋಡಿಜಾಲ್ ಮಾತನಾಡಿ, ಕೊಣಾಜೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಶೌಕತ್ ಆಲಿ ಮತ್ತು ಸಾಯಿ ಫ್ರೆಂಡ್ಸ್ ಅಸೈಗೋಳಿ ಇದರ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಜೊತೆಗೂಡಿ ಆಯುಷ್ಮಾನ್ ಕಾರ್ಡ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈ ಕಾರ್ಡ್ ಉತ್ತಮ ರೀತಿಯಲ್ಲಿ ಜನರಿಗೆ ಪ್ರಯೋಜನವಾಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಸಂಘಟನಾ ಕಾರ್ಯದರ್ಶಿ ಇಕ್ಬಾಲ್ ಸಾಮಾನಿಗೆ, ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಅಝೀಝ್, ಉದ್ಯಮಿ ಜಬ್ಬಾರ್ ಮಾರಿಪಳ್ಳ ಮೊದಲಾದವರು ಉಪಸ್ಥಿತರಿದ್ದರು.