ಮಂಗಳೂರು: ಅನಾರೋಗ್ಯಪೀಡಿತರಾದ ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯ ಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರು ಶೀಘ್ರ ಗುಣಮುಖರಾಗಲೆಂದು ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ದೇವಸ್ಥಾನ, ಚರ್ಚ್ ಹಾಗೂ ಮಸೀದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಗರದ ಕುದ್ರೋಳಿಯ ಗೋಕರ್ಣನಾಥ ದೇವಾಲಯ, ರೊಸಾರಿಯೋ ಚರ್ಚ್ ಹಾಗೂ ಉಳ್ಳಾಲದ ಸಯ್ಯದ್ ಮದನಿ ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನ ಪ್ರೀತಿಯ ತಮ್ಮ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ಸ್ಥಿತಿ ಅಷ್ಟೊಂದು ಸರಿಯಿಲ್ಲ. ಅವರು ಶೀಘ್ರ ಗುಣಮುಖರಾಗಲು ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಲ್ಲಿ ಪೂಜೆ ನೆರವೇರಿಸಿದ್ದೇನೆ. ಅವರಿಗೆ ಪರಮಾತ್ಮ ಶಕ್ತಿಯನ್ನು ಕೊಡಬೇಕೆಂದು ಪ್ರಾರ್ಥನೆ ಮಾಡಿದ್ದೇನೆ. ಅವರಿಗೆ ಏನೂ ಆಗಲ್ಲ, ಅವರು ಒಳ್ಳೆಯ ಮನುಷ್ಯ, ದೇವತಾ ಮನುಷ್ಯ. ಈ ಜಗತ್ತಿನಲ್ಲಿ ಅಂತವರು ಸಿಗೋದೇ ಕಷ್ಟ. ಒಬ್ಬರಿಗೂ ಕೆಡುಕನ್ನು ಅವರು ಬಯಸಿಲ್ಲ. ಎಲ್ಲರನ್ನೂ ಪ್ರೀತಿಯಿಂದ ಅಪ್ಪಿಕೊಂಡವರು. ಈಗ ಅವರಿಗೆ ದೇವರು ಶಕ್ತಿ ಕೊಡುತ್ತಾನೆ. ಇಲ್ಲದಿದ್ದರೆ, ಈ ಜಗತ್ತಿನಲ್ಲಿ ದೇವರೆ ಇಲ್ಲ ಎಂದು ಭಾವುಕರಾದರು.