ಮಂಗಳೂರು: ಚಡ್ಡಿ, ಕರಿಟೋಪಿ ಮತ್ತು ದೊಣ್ಣೆ ಹಿಡಿದುಕೊಂಡು ದೇಶ ಕಾಪಾಡುತ್ತೇವೆ ಎಂದು ಹೇಳುವ ಆರ್ಎಸ್ಎಸ್ ದೇಶದ ಯೋಧರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ. ಕೆ ಹರಿಪ್ರಸಾದ್ ಹೇಳಿದರು.
ಮಂಗಳೂರಿನಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ನವರು ದೇಶ ರಕ್ಷಿಸುತ್ತೇವೆ ಎನ್ನುತ್ತ ರಾಷ್ಟ್ರದಲ್ಲಿರುವ 50 ಲಕ್ಷ ಮಂದಿ ಸೈನಿಕರು, ಪೊಲೀಸರು, ಪ್ಯಾರಾ ಮಿಲಿಟರಿ ಯೋಧರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಹೇಳಿದರು.
ಈ ದೇಶವನ್ನು ರಕ್ಷಣೆ ಮಾಡಲು ಯೋಧರಿದ್ದಾರೆ. ಇವರು ಯಾವತ್ತಿಗೂ ರಾಷ್ಟ್ರ ರಕ್ಷಣೆಗೆ ಮುಂದೆ ನಿಂತಿರಲಿಲ್ಲ. ಕಾಕಿಚಡ್ಡಿ, ಕರಿಟೋಪಿ ಕಾಣಸಿಗುವುದು ಜರ್ಮನಿಯ ಹಿಟ್ಲರ್ ಆರ್ಮಿಯಲ್ಲಿ. ಇದೀಗ ಆರ್ಎಸ್ಎಸ್ ನವರು ಅದನ್ನು ತೊಟ್ಟು ಹಿಂದೂ ಧರ್ಮವನ್ನು ರಕ್ಷಣೆ ಮಾಡುತ್ತೇವೆ ಎಂದು ಹೇಳುತ್ತಿರುವುದು ಜನರ ಕಣ್ಣಿಗೆ ಮಣ್ಣೆರಚುವ ಕೆಲಸವಾಗಿದೆ.
ಅವರ ಅಸ್ಮಿತೆಯನ್ನೇ ರಕ್ಷಿಸಲು ಅವರಿಗೆ ಆಗಿಲ್ಲ. ಅದರ ಮೇಲೆ ರಾಷ್ಟ್ರ ಕಾಪಾಡಲು ಇವರಿಗೆ ಸಾಧ್ಯವಿದೆಯೇ?. ಕಾಕಿ ಚಡ್ಡಿ ಎಂದರೆ ತ್ಯಾಗ-ಬಲಿದಾನಗಳ ಸಂಕೇತ ಎಂದು ಹೇಳುತ್ತಿದ್ದವರು ಈಗ ಪ್ಯಾಂಟ್ಗೆ ಹೇಗೆ ಬದಲಾದರು. ಶೇ 40ರಷ್ಟು ಕಮಿಷನ್ ಪಡೆದ ಬಳಿಕ ಪ್ಯಾಂಟ್, 10 ಲಕ್ಷ ರೂ. ಸೂಟ್ ಎಲ್ಲವೂ ಬರುತ್ತದೆ ಎಂದರು.
ಓದಿ: ಬೆಂಗಳೂರಿನಲ್ಲಿ ಕಾಶ್ಮೀರ ಮೂಲದ ಶಂಕಿತ ಉಗ್ರನ ಬಂಧನ: ಗೃಹ ಸಚಿವ ಆರಗ ಜ್ಞಾನೇಂದ್ರ