ETV Bharat / state

ಪ್ರತಿಕೂಲ ಹವಾಮಾನ: ಎರಡು ವಿಮಾನಗಳು ಡೈವರ್ಟ್ ಆಗಿ ಮತ್ತೆ ಮಂಗಳೂರಿಗೆ - ಮಂಗಳೂರು ಏರ್ಪೋರ್ಟ್

ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನವನ್ನು ಕೂಡ ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿಗೆ ಡೈವರ್ಟ್ ಮಾಡಲಾಯಿತು.

bad weather two flights diverted back to mangalore
ಪ್ರತಿಕೂಲ ಹವಾಮಾನ: ಎರಡು ವಿಮಾನಗಳು ಡೈವರ್ಟ್ ಆಗಿ ಮತ್ತೆ ಮಂಗಳೂರಿಗೆ
author img

By

Published : Jul 22, 2023, 4:17 PM IST

Updated : Jul 22, 2023, 5:53 PM IST

ಮಂಗಳೂರು: ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ ಎರಡು ವಿಮಾನಗಳನ್ನು ಡೈವರ್ಟ್ ಮಾಡಿ ಬಳಿಕ ಮತ್ತೆ ಮಂಗಳೂರಿನಲ್ಲಿ ‌ಇಳಿಸಲಾಯಿತು. ಪ್ರತಿಕೂಲ ಹವಾಮಾನ ಹಿನ್ನೆಲೆ ಬೆಂಗಳೂರು - ಮಂಗಳೂರು ಮತ್ತು ಮುಂಬೈ - ಮಂಗಳೂರು ನಡುವಿನ ವಿಮಾನ ಸಂಚಾರ ವ್ಯತ್ಯಯವಾಗಿತ್ತು. ಬೆಂಗಳೂರಿನಿಂದ ‌ಮಂಗಳೂರಿಗೆ ಬರುವ ವಿಮಾನದಲ್ಲಿ ಆರೋಗ್ಯ ಸಚಿವ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಯಾಣಿಸುತ್ತಿದ್ದರು.

ಬೆಂಗಳೂರಿನಿಂದ ಹೊರಟು ಮಂಗಳೂರು ಏರ್ಪೋರ್ಟ್​ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಕಣ್ಣೂರಿಗೆ ಡೈವರ್ಟ್ ಮಾಡಲಾಯಿತು. ಬೆಂಗಳೂರಿನಿಂದ 9.55ಕ್ಕೆ ಹೊರಟಿದ್ದ ಇಂಡಿಗೋ ವಿಮಾನ ಬೆಳಗ್ಗೆ 11 ಗಂಟೆಗೆ ಮಂಗಳೂರು ಏರ್ಪೋರ್ಟ್​ನಲ್ಲಿ‌ ಲ್ಯಾಂಡ್ ಆಗಬೇಕಿತ್ತು. ಪ್ರತಿಕೂಲ ಹವಾಮಾನ ಹಿನ್ನೆಲೆ ಕೇರಳದ ಕಣ್ಣೂರು ಏರ್ಪೋರ್ಟ್​ನಲ್ಲಿ ಲ್ಯಾಂಡ್ ಮಾಡಲಾಯಿತು. ಬಳಿಕ ಹವಾಮಾನ ಬದಲಾವಣೆ ಬೆನ್ನಲ್ಲೇ ಮಂಗಳೂರು ಏರ್ಪೋರ್ಟ್​ನಲ್ಲಿ ಲ್ಯಾಂಡಿಂಗ್​ಗೆ ಅನುಮತಿ ನೀಡಲಾಯಿತು.

ಇದೇ ರೀತಿ ಮುಂಬಯಿನಿಂದ ಮಂಗಳೂರಿಗೆ ಹೊರಟಿದ್ದ ವಿಮಾನವು ಕೂಡ ಹವಾಮಾನ ವೈಪರೀತ್ಯದಿಂದ ಮಂಗಳೂರಿನಲ್ಲಿ ಇಳಿಯಲು ಸಾಧ್ಯವಾಗಲಿಲ್ಲ. ಈ ವಿಮಾನವನ್ನು ಬೆಂಗಳೂರಿಗೆ ಡೈವರ್ಟ್ ಮಾಡಲಾಯಿತು. ಬಳಿಕ ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಮಂಗಳೂರು ಏರ್ಪೋರ್ಟ್​ನಲ್ಲಿ ಲ್ಯಾಂಡಿಂಗ್​ಗೆ ಅವಕಾಶ ನೀಡಲಾಯಿತು. ಹವಾಮಾನ ವೈಪರೀತ್ಯದಿಂದ ಡೈವರ್ಟ್ ಆಗಿದ್ದ ಬೆಂಗಳೂರು - ಮಂಗಳೂರು ಮತ್ತು ಮುಂಬಯಿ- ಮಂಗಳೂರು ವಿಮಾನ ಮತ್ತೆ ಮಂಗಳೂರು ತಲುಪಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಏರ್​ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ: ಏರ್​ ಇಂಡಿಯಾ ವಿಮಾನವೊಂದರಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್​ ಸ್ಫೋಟಗೊಂಡ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಕ್ಷಗೊಂಡ ಘಟನೆ ಇತ್ತೀಚೆಗೆ ರಾಜಸ್ಥಾನದ ಉದಯಪುರದಲ್ಲಿ ನಡೆದಿತ್ತು. ವಿಮಾನ ಮಧ್ಯಾಹ್ನ 1 ಗಂಟೆಗೆ ಉದಯಪುರ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿತ್ತು. ವಿಮಾನ ಟೇಕ್​ ಆಫ್​ ಆದ ಕೆಲವೇ ಹೊತ್ತಿನಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಮೊಬೈಲ್​​ ಬ್ಯಾಟರಿ ಸ್ಫೋಟಗೊಂಡಿತ್ತು.

ವಿಮಾನದಲ್ಲಿ 140 ಮಂದಿ ಪ್ರಯಾಣಿಸುತ್ತಿದ್ದರು. ತಕ್ಷಣ ಪೈಲಟ್​ ಸಮಯ ಪ್ರಜ್ಞೆಯಿಂದ ವಿಮಾನ ತುರ್ತು ಭೂಸ್ಪರ್ಶ ಮಾಡಿತ್ತು. ಉದಯಪುರದ ದಬೋಕ್​ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿತ್ತು. ನಂತರ ಪ್ರಯಾಣಿಕರೆಲ್ಲರನ್ನು ವಿಮಾನದಿಂದ ಕೆಳಗಿಳಿಸಿ, ಎಲ್ಲಾ ರೀತಿಯಲ್ಲೂ ಪರಿಶೀಲನೆ ನಡೆಸಿ, ಮತ್ತೆ ವಿಮಾನ ದೆಹಲಿಗೆ ಪ್ರಯಾಣ ಬೆಳೆಸಿತ್ತು.

ಇದನ್ನೂ ಓದಿ: ಅಮೆರಿಕದಲ್ಲಿ ಭಾರಿ ಮಳೆ.. 2600 ವಿಮಾನಗಳ ಸೇವೆ ರದ್ದು, ತಡವಾಗಿ ಚಲಿಸಲಿರುವ 8 ಸಾವಿರ ಲೋಹದ ಹಕ್ಕಿಗಳು!!

Last Updated : Jul 22, 2023, 5:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.