ETV Bharat / state

ನಮೀಬಿಯಾ ಚೀತಾಗೆ ಸೀಮಂತ ಯಾವಾಗ ಎಂದ ಸಾಮಾಜಿಕ ಕಾರ್ಯಕರ್ತನಿಗೆ ಜಾಮೀನು - etv bharat kannada

ನಮೀಬಿಯಾದಿಂದ ತರಿಸಲಾದ ಚೀತಾ ಗರ್ಭಿಣಿಯಾದ ವಿಚಾರದಲ್ಲಿ ಫೇಸ್‌ಬುಕ್‌ ಪೋಸ್ಟ್ ಹಾಕಿ ಬಂಧನಕ್ಕೊಳಗಾದ ಮಂಗಳೂರಿನ ಸಾಮಾಜಿಕ ಕಾರ್ಯಕರ್ತಗೆ ಜಾಮೀನು ಸಿಕ್ಕಿದೆ.

Bail for social worker sunil bajilakeri in Facebook post case
ನಮೀಬಿಯಾ ಚೀತಾಗೆ ಸೀಮಂತ ಯಾವಾಗ ಎಂದ ಸಾಮಾಜಿಕ ಕಾರ್ಯಕರ್ತನಿಗೆ ಜಾಮೀನು
author img

By

Published : Oct 8, 2022, 6:39 PM IST

ಮಂಗಳೂರು: ನಮೀಬಿಯಾದಿಂದ ತರಿಸಲಾದ ಚೀತಾ ಗರ್ಭಿಣಿಯಾದ ವಿಚಾರದಲ್ಲಿ ಫೇಸ್‌ಬುಕ್‌ ಪೋಸ್ಟ್ ಹಾಕಿ ಬಂಧನಕ್ಕೊಳಗಾದ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಅವರು ಚಿರತೆ ಚಿತ್ರ ಬಳಸಿ ಗರ್ಭಿಣಿಗೆ ಅವಹೇಳನ ಮಾಡಿದ್ದಾರೆ ಎಂಬ ಆರೋಪದಡಿ ನಿನ್ನೆ ಮಧ್ಯರಾತ್ರಿ ಬಂಧಿಸಲಾಗಿತ್ತು. ಸುನೀಲ್ ಬಜಿಲಕೇರಿ ಅವರು ಫೇಸ್‌ಬುಕ್‌ನಲ್ಲಿ ‌'ನಮೀಬಿಯಾ ಚೀತಾಗೆ ಸೀಮಂತ ಯಾವಾಗ?' ಅಂತ ಪೋಸ್ಟ್ ಮಾಡಿ ಗರ್ಭಿಣಿಯ ಫೋಟೋಗೆ ಚೀತಾದ ಮುಖ ಎಡಿಟ್ ಮಾಡಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ.

ಈ ಫೇಸ್​​ಬುಕ್ ಪೋಸ್ಟ್ ಬಗ್ಗೆ ಗರ್ಭಿಣಿ ಮತ್ತು ಭಾರತೀಯ ಸಂಸ್ಕೃತಿಗೆ ಅವಹೇಳನ ಅಂತ ಎಡಪದವು ಗ್ರಾಮದ ಮಹಿಳೆಯೊಬ್ಬರು ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸುನಿಲ್ ಬಜಿಲಕೇರಿಯನ್ನು ಬಂಧಿಸಲಾಗಿತ್ತು.

ಇಂದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಈ ವೇಳೆ, ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಇದೀಗ ಜಾಮೀನಿನ ಮೇಲೆ ಸುನಿಲ್ ಬಜಿಲಕೇರಿ ಬಿಡುಗಡೆಗೊಂಡಿದ್ದಾರೆ.

ಇದನ್ನೂ ಓದಿ: ನಮೀಬಿಯಾದಿಂದ ಬಂದ ಚೀತಾ ಪ್ರಗ್ನೆಂಟ್​.. ಎಫ್​ಬಿಯಲ್ಲಿ ವ್ಯಂಗ್ಯದ ಪೋಸ್ಟ್, ಸಾಮಾಜಿಕ ಕಾರ್ಯಕರ್ತ ಅರೆಸ್ಟ್​​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.