ETV Bharat / state

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಗೆ SIT ರಚನೆಗೆ ಬಜರಂಗದಳ ಆಗ್ರಹ: ನಾಳೆ ಎಲ್ಲ ತಾಲೂಕು ಕೇಂದ್ರದಲ್ಲಿ ಶೃದ್ದಾಂಜಲಿ ಸಭೆ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ತನಿಖೆಗೆ ರಾಜ್ಯ ಸರಕಾರವು ವಿಶೇಷ ತಂಡವನ್ನು ರಚಿಸಬೇಕು.ಜೊತೆಗೆ ಪ್ರಕರಣದ ತನಿಖೆಗೆ ದಕ್ಷ ಅಧಿಕಾರಿಯನ್ನು ನೇಮಿಸಬೇಕೆಂದು ಬಜರಂಗದಳ ಒತ್ತಾಯಿಸಿದೆ.

bajrang-dal-demands-formation-of-sit-topraveen-nettar-murder-case
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಗೆ SIT ರಚನೆಗೆ ಭಜರಂಗದಳ ಆಗ್ರಹ : ನಾಳೆ ಎಲ್ಲಾ ತಾಲೂಕು ಕೇಂದ್ರದಲ್ಲಿ ಶೃದ್ದಾಂಜಲಿ ಸಭೆ
author img

By

Published : Jul 28, 2022, 8:37 PM IST

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಬಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ ಐ ಟಿ) ರಚನೆ ಮಾಡಬೇಕು ಎಂದು ಬಜರಂಗದಳ ಆಗ್ರಹಿಸಿದೆ. ಇಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಜರಂಗದಳ ಮುಖಂಡ ಸುನಿಲ್ ಕೆ ಆರ್ ಅವರು, ಪ್ರವೀಣ್ ನೆಟ್ಟಾರು ಹತ್ಯೆ ಅತ್ಯಂತ ಖಂಡನೀಯ.

ಇದೊಂದು ಪೂರ್ವಯೋಜಿತ ಕೃತ್ಯವಾಗಿದ್ದು, ಸಂಚು ರೂಪಿಸಿ ವ್ಯವಸ್ಥಿತವಾಗಿ ಕೊಲೆ ಮಾಡಲಾಗಿದೆ. ಈ ಕೊಲೆ ಪ್ರಕರಣವನ್ನು ವಿಶೇಷ ತನಿಖಾ ದಳ ರಚನೆ ಮಾಡಿ (SIT), ಒಬ್ಬ ದಕ್ಷ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಗೆ SIT ರಚನೆಗೆ ಬಜರಂಗದಳ ಆಗ್ರಹ : ನಾಳೆ ಎಲ್ಲ ತಾಲೂಕು ಕೇಂದ್ರದಲ್ಲಿ ಶೃದ್ದಾಂಜಲಿ ಸಭೆ

ಪ್ರವೀಣ್ ನೆಟ್ಬಾರ್ ರವರ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ. ಲಾರಿ ಚಾರ್ಜ್ ಮಾಡಿದ ಪೊಲೀಸರನ್ನು ಅಮಾನತುಗೊಳಿಸಬೇಕು. ಅಂತಿಮಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಅತ್ಯಂತ ದುಃಖದಿಂದ ಪಾಲ್ಗೊಂಡಿದ್ದು, ಈ ಅಂತಿಮಯಾತ್ರೆಯಲ್ಲಿ ಪೊಲೀಸರು ಮಾಡಿರುವ ಲಾಠಿ ಚಾರ್ಜ್ ಮಾಡಿರುವ ಕ್ರಮ ಅತ್ಯಂತ ಖಂಡನೀಯ ಎಂದು ಹೇಳಿದರು.

ಪ್ರವೀಣ್ ಹತ್ಯೆ ಹಿನ್ನೆಲೆ ನಾಳೆ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ. ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಬಜರಂಗದಳ ನೇತೃತ್ವದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ನಡೆಯಲಿದೆ ಅವರು ಎಂದರು.

ಓದಿ : ಪ್ರವೀಣ್ ಹತ್ಯೆ ಪ್ರಕರಣ : ಬೆಳ್ತಂಗಡಿಯಲ್ಲಿ ಬಿಗಿ ಬಂದೋಬಸ್ತ್.. ಪೊಲೀಸರ ಪಥ ಸಂಚಲನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.