ಮಂಗಳೂರು: ನಗರದ ಗುರುಪುರದಲ್ಲಿರುವ ಬಂಗ್ಲಗುಡ್ಡೆ ಗುಡ್ಡ ಕುಸಿತದಿಂದ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಧನದ ಚೆಕ್ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿತರಿಸಿದರು.
ಗುಡ್ಡ ಕುಸಿತದಿಂದ ಮನೆ ಸಂಪೂರ್ಣ ಹಾನಿಗೊಳಗಾಗಿರುವ ಪರಿಣಾಮ ಮೃತ ಮಕ್ಕಳ ಹೆತ್ತವರು ನಗರದ ಮೂಡುಶೆಡ್ಡೆ ಬಳಿಯ ಎದುರು ಪದವಿನಲ್ಲಿರುವ ತಮ್ಮ ಕುಟುಂಬಸ್ಥರ ಮನೆಯಲ್ಲಿ ವಾಸ್ತವ್ಯ ಇದ್ದಾರೆ. ಆ ಮನೆಗೆ ತೆರಳಿ ಮೃತ ಮಕ್ಕಳ ಪೋಷಕರಿಗೆ ಪರಿಹಾರ ಚೆಕ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಮುಲ್ಕಿ - ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಡಿಸಿ, ತಹಶೀಲ್ದಾರ್, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.