ಮಂಗಳೂರು: ಬೆಂಗಳೂರಿನಲ್ಲಿ ಶಾಸಕರ ಮನೆಗೆ ಬೆಂಕಿ ಹಚ್ಚಿ, ಪೊಲೀಸ್ ಠಾಣೆಗೆ ನುಗ್ಗಿ ಪೀಠೋಪಕರಣ ಹಾನಿ ಮಾಡಿರುವುದು ಖಂಡನೀಯ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಶಾಸಕರ ಮನೆಗೆ ಬೆಂಕಿ ಹಚ್ಚಿದ, ಪೊಲೀಸ್ ಠಾಣೆಗೆ ಹಾನಿ ಮಾಡಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪುಂಡಾಟಿಕೆ, ಗೂಂಡಾಗಿರಿ ಮೆರೆದವರ ವಿರುದ್ಧ ಮುಖ್ಯಮಂತ್ರಿಗಳು ನಿರ್ದಾಕ್ಷಿಣ್ಯ ಕ್ರಮಕ್ಕೆ ಆದೇಶಿಸಿರುವುದು ಸ್ವಾಗತಾರ್ಹ ಎಂದು ಅವರು ಹೇಳಿದ್ದಾರೆ.
ಶಾಸಕರ ಸಹಿತ ಯಾರ ಜೊತೆಗೂ ಅಭಿಪ್ರಾಯ ಭೇದ ಇದ್ದರೆ ಚರ್ಚೆ ಮಾಡಲು ಅವಕಾಶವಿದೆ. ಅದನ್ನು ಬಿಟ್ಟು ಕಾನೂನು ಕೈಗೆತ್ತಿಕೊಂಡಿದ್ದು ಖಂಡನೀಯ. ಗೃಹ ಸಚಿವರು, ಮುಖ್ಯಮಂತ್ರಿಗಳು ಪುಂಡಾಟಿಕೆ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಆದೇಶಿಸಿರುವುದನ್ನು ಸ್ವಾಗತಿಸುತ್ತೇನೆ. ಇನ್ನು ಮುಂದೆ ಇಂತಹ ಪುಂಡಾಟಿಕೆ ರಾಜ್ಯದಲ್ಲಿ ನಡೆಯಬಾರದು ಎಂದಿದ್ದಾರೆ.