ETV Bharat / state

ಮಂಗಳೂರು: ಹೋಟೆಲ್‌ನ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜರ್ ಮೃತದೇಹ ಪತ್ತೆ - private hotel

Bank manager died: ಮಂಗಳೂರಿನಲ್ಲಿ ಹೋಟೆಲ್​ವೊಂದರ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜರ್ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bank manager died
ಮಂಗಳೂರಿನ ಮೋತಿಮಹಲ್ ಹೋಟೆಲ್​ನ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜರ್ ಸಾವು
author img

By ETV Bharat Karnataka Team

Published : Sep 11, 2023, 12:07 PM IST

Updated : Sep 11, 2023, 3:33 PM IST

ಮಂಗಳೂರು (ದಕ್ಷಿಣ ಕನ್ನಡ): ನಗರದ ಪ್ರತಿಷ್ಠಿತ ಹೋಟೆಲ್​ವೊಂದರ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜರ್​ವೊಬ್ಬರ ಮೃತದೇಹ ಪತ್ತೆಯಾಗಿದೆ. ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಮೃತಪಟ್ಟವರು. ಇವರು ಕೇರಳದಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.

ಗೋಪು ಆರ್. ನಾಯರ್ ಅವರು ಸ್ಮಿಮ್ಮಿಂಗ್ ಪೂಲ್​ನಲ್ಲಿ ಮುಳುಗಿ‌ ಸಾವನ್ನಪ್ಪಿರುವ ಕುರಿತು ಅನುಮಾನ ವ್ಯಕ್ತವಾಗಿದೆ. ನಿನ್ನೆ (ಭಾನುವಾರ) ಮಂಗಳೂರಿಗೆ ಬಂದು ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಸಂಜೆ 4 ಗಂಟೆಯ ಸುಮಾರಿಗೆ ಕೊಠಡಿಯಿಂದ ಬ್ಯಾಂಕ್ ಮ್ಯಾನೇಜರ್ ಹೊರಗಡೆ ಹೋಗಿದ್ದರು. ಇದಾದ ಬಳಿಕ ಈಜುಕೊಳದಿಂದ ಅವರ ಮೃತದೇಹವನ್ನು ಹೊರತೆಗೆಯಲಾಗಿದೆ. ಮೃತದೇಹ ಸುಮಾರು 11 ಅಡಿ ಆಳದಲ್ಲಿತ್ತು. ಈಜುತ್ತಿರುವಾಗ ಮೇಲೆ ಬರಲು ಸಾಧ್ಯವಾಗದೇ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಗೋಪು ನಾಯರ್ ತಂಗಿದ್ದ ಹೋಟೆಲ್ ರೂಂನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎನ್ನಲಾಗಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾವೇರಿಯಲ್ಲಿ ಗಣೇಶ ಚತುರ್ಥಿ ಸಂಭ್ರಮಕ್ಕೆ ಪಟಾಕಿ ದುರಂತದ ಕರಿಛಾಯೆ

Last Updated : Sep 11, 2023, 3:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.