ETV Bharat / state

ಪ್ರಾರ್ಥನಾ ಮಂದಿರ ಪ್ರವೇಶಿಸಿದ ಆರೋಪಿ ಬಂಧನ

author img

By

Published : Mar 2, 2022, 2:07 PM IST

ಧರ್ಮವೊಂದರ ಪ್ರಾರ್ಥನಾ ಮಂದಿರಕ್ಕೆ ಅಕ್ರಮವಾಗಿ ಪ್ರವೇಶಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

bantwala-police-arrested-a-person-near-bc-road
ಪ್ರಾರ್ಥನಾ ಮಂದಿರ ಪ್ರವೇಶಿಸಿದ ಆರೋಪಿ ಬಂಧನ

ಬಂಟ್ವಾಳ(ದ. ಕನ್ನಡ): ಬಂಟ್ವಾಳದ ಬಿ.ಸಿ. ರೋಡ್​ನ ಮಿತ್ತಬೈಲ್​​ನಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಧರ್ಮವೊಂದರ ಪ್ರಾರ್ಥನಾ ಮಂದಿರಕ್ಕೆ ಅಕ್ರಮವಾಗಿ ಪ್ರವೇಶಿದ ಆರೋಪಿಯನ್ನು ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ಈ ಬಗ್ಗೆ ಇಲ್ಲಿನ ಪ್ರಾರ್ಥನಾ ಮಂದಿರದವರು ಪೊಲೀಸರಿಗೆ ದೂರು ನೀಡಿದ್ದರು.

60 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಪ್ರಾರ್ಥನಾ ಮಂದಿರಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ ಎನ್ನಲಾಗಿದೆ. ಆತನನ್ನು ವಿಚಾರಿಸಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಂಧಿತನನ್ನು ವಿಚಾರಿಸಿದಾಗ ದ್ವಿಚಕ್ರ ವಾಹನದಲ್ಲಿ ಚಾಕು ಸಿಕ್ಕಿದೆ ಎಂದು ದೂರಿದ್ದರು.

ಇದನ್ನೂ ಓದಿ: ಉಕ್ರೇನ್‌ನಲ್ಲಿ ಬಲಿಯಾದ ಹಾವೇರಿಯ ನವೀನ್‌ SSLCಯಲ್ಲಿ ಟಾಪರ್‌, ಪಿಯುನಲ್ಲಿ ಶೇ.97ರಷ್ಟು ಅಂಕ..!

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಬಂಟ್ವಾಳ ನಗರ ಠಾಣೆ ಪೊಲೀಸರು ಅಕ್ರಮ ಪ್ರವೇಶ ಮಾಡಿದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪ್ರಾರ್ಥನಾ ಮಂದಿರಕ್ಕೆ ಸೂಕ್ತ ಭದ್ರತೆ ಒದಗಿಸಬೇಕಾಗಿ ದೂರು ನೀಡಿದ್ದವರು ಪೊಲೀಸರಿಗೆ ಮನವಿ ಮಾಡಿದ್ಧಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.