ಧರ್ಮಸ್ಥಳ: ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಏಪ್ರಿಲ್ 29 ರ ಸಂಜೆ 6.40ಕ್ಕೆ ಗೋಧೂಳಿ ಲಗ್ನದ ಶುಭ ಮುಹೂರ್ತದಲ್ಲಿ ನಡೆಯಲಿದ್ದು, ವಿವಾಹ ನೋಂದಣಿ ಕಾರ್ಯಕ್ರಮ ಅಧಿಕೃತವಾಗಿ ಈಗ ಶುಭಾರಂಭಗೊಂಡಿದೆ.
ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭ ಆಶೀರ್ವಾದಗಳೊಂದಿಗೆ ಪೂಜ್ಯರ ಆಪ್ತ ಕಾರ್ಯದರ್ಶಿಯಾದ ಎ.ವಿ.ಶೆಟ್ಟಿ ವಿವಾಹ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಇನ್ನು ಮುಂದಿನ ದಿನಗಳಲ್ಲಿ ಅರ್ಹರಿಗೆ ವಿವಾಹ ನೋಂದಣಿ ಕಾರ್ಯ ನಡೆಯಲಿದೆ.
ಇನ್ನು ಕಾರ್ಯಕ್ರಮದಲ್ಲಿ ಶ್ರೀನಿವಾಸ್ ರಾವ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.