ETV Bharat / state

ಲಾಕ್ ಡೌನ್ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ವಿಧಿಸಿ ಬಿಸಿಮುಟ್ಟಿಸಿದ ಬೆಳ್ತಂಗಡಿ ಪೊಲೀಸರು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿ ರಸ್ತೆಗಿಳಿದ ವಾಹನ ಸವಾರರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

Belthangady police  fined motorists
ವಾಹನ ಸವಾರರಿಗೆ ದಂಡ ವಿಧಿಸಿ ಬಿಸಿಮುಟ್ಟಿಸಿದ ಬೆಳ್ತಂಗಡಿ ಪೊಲೀಸರು
author img

By

Published : Apr 8, 2020, 8:39 AM IST

ಬೆಳ್ತಂಗಡಿ: ನಿಷೇಧಾಜ್ಞೆ ಉಲ್ಲಂಘಿಸಿ ಅನಗತ್ಯವಾಗಿ ರಸ್ತೆಗಿಳಿದ ವಾಹನ ಸವಾರರಿಗೆ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.

ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ಅಗತ್ಯ ವಸ್ತುಗಳಾದ ಪಡಿತರ ಖರೀದಿ, ಔಷಧಿ, ತುರ್ತು ಆಸ್ಪತ್ರೆ ಭೇಟಿ, ಸರ್ಕಾರಿ ಅಧಿಕಾರಿಗಳಿಗೆ ಓಡಾಡಲು ಅವಕಾಶ ನೀಡಲಾಗಿತ್ತು. ಇದರ ಹೊರತಾಗಿಯೂ ಕೆಲವರು ಅನಾವಶ್ಯಕವಾಗಿ ರಸ್ತೆಗಳಿದ್ದರು. ಹೀಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿದ್ದಾರೆ.

ಬೆಳ್ತಂಗಡಿ ವೃತ್ತ ನಿರೀಕ್ಷಕರ ವ್ಯಾಪ್ತಿಯಲ್ಲಿ ಒಂದು ಸಂಚಾರಿ ಠಾಣೆ ಹಾಗೂ ನಾಲ್ಕು ಪೊಲೀಸ್ ಠಾಣೆಗಳಲ್ಲಿ ಒಟ್ಟು 36 ವಾಹನಗಳನ್ನು ವಶಕ್ಕೆ ಪಡೆದು 36 ಸಾವಿರ ರೂ.ದಂಡ ಸಂಗ್ರಹಿಸಲಾಗಿದೆ. ಸರ್ಕಾರದ ಸೂಚನೆಯಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ತಿಳಿಸಿದ್ದಾರೆ.

ತಾಲೂಕಿನಲ್ಲಿ 66 ನ್ಯಾಯಬೆಲೆ ಅಂಗಡಿಗಳಲ್ಲಿ ಮಂಗಳವಾರ ತನಕ ಒಟ್ಟು ಶೇ.49ರಷ್ಟು ಪಡಿತರ ವಿತರಣೆಯಾಗಿದೆ. ಈವರೆಗೆ ಒಟ್ಟು 23,931 ಪಡಿತರ ಚೀಟಿದಾರರಿಗೆ ಪಡಿತರ ವಿತರಿಸಲಾಗಿದ್ದು, ಮಂಗಳವಾರ ಒಂದೇ ದಿನ 4,300 ಜನರಿಗೆ ಪಡಿತರ ಅಕ್ಕಿ ವಿತರಿಸಲಾಗಿದೆ. ಕೆಲವೆಡೆ ಕುಚ್ಚಲು ಅಕ್ಕಿ ವಿತರಿಸಲಾಗಿದೆ ಎಂದು ಆಹಾರ ಇಲಾಖೆ ನಿರೀಕ್ಷಕ ವಿಶ್ವ ಕೆ.ಮಾಹಿತಿ ನೀಡಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.