ETV Bharat / state

ಮಂಗಳೂರು : ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದಿದ್ದ ಮಹಿಳಾ ಯಾತ್ರಾರ್ಥಿ ಆತ್ಮಹತ್ಯೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರು ಸಮೀಪದ ಕಾಡಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

bengaluru-women-committed-in-mangaluru
ಮಂಗಳೂರು : ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದಿದ್ದ ಯಾತ್ರಾರ್ಥಿ ಮಹಿಳೆ ಆತ್ಮಹತ್ಯೆ
author img

By

Published : Jul 8, 2023, 12:26 PM IST

ಮಂಗಳೂರು : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರು ಸಮೀಪದ ಕಾಡಿಗೆ ತೆರಳಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯದ ದೇವರಗದ್ದೆ ಬಳಿ ನಡೆದಿದೆ. ಬೆಂಗಳೂರಿನ ನೆಲಮಂಗಲ ಮೂಲದ ಗಂಗಮ್ಮ ಲಕ್ಷ್ಮಮ್ಮ (60) ಎಂಬವರು ಆತ್ಮಹತ್ಯೆಗೆ ಶರಣಾದ ಮಹಿಳೆ.

ಇವರು ಎರಡು ಮೂರು ದಿನಗಳ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹದ ಬಳಿ ಇದ್ದ ಮೊಬೈಲ್ ಮೂಲಕ ಕುಟುಂಬದವರ ವಿಳಾಸ ಪತ್ತೆ ಮಾಡಿ ಮಾಹಿತಿಯನ್ನು ರವಾನಿಸಲಾಗಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆನ್ಲಾಕ್​ ಆಸ್ಪತ್ರೆಯಲ್ಲಿ ವ್ಯಕ್ತಿ ಆತ್ಮಹತ್ಯೆ : ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ವೆನ್ಲಾಕ್​ ಆಸ್ಪತ್ರೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ದಿವಾಕರ್ (36) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ಮೃತ ದಿವಾಕರ್​ ಅವರು ಕಳೆದ ಜೂನ್ 30ರಂದು ಅತಿಯಾಗಿ ಮದ್ಯ ಸೇವಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶುಕ್ರವಾರ ವೆನ್ಲಾಕ್ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತನ ಸಹೋದರ ಚಂದ್ರಶೇಖರ್ ದಕ್ಷಿಣ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ : Chikkamagaluru crime: ಎರಡನೇ ಹೆಂಡತಿ ಕಡೆ ಗಂಡನಿಗೆ ಹೆಚ್ಚಿನ ಒಲವು: ಸವತಿಯನ್ನು ಕೊಂದು ಪೊಲೀಸರಿಗೆ ಶರಣಾದ ಮೊದಲ ಪತ್ನಿ

ಜೂಜಾಟ.. ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ : ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್ ಬಸ್ಸು ತಂಗುದಾಣದ ಹಿಂಭಾಗದಲ್ಲಿ ಜೂಜಾಟ ಆಡುತ್ತಿದ್ದ ಇಬ್ಬರನ್ನು ಸುರತ್ಕಲ್​ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಸಂಜೆ ಬಸ್ಸು ತಂಗುದಾಣದ ಸಾರ್ವಜನಿಕ ಶೌಚಾಲಯದ ಬಳಿ ಮಟ್ಕಾ ಜೂಜಾಟ ಆಡುತ್ತಿದ್ದಾಗ ಸುರತ್ಕಲ್ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮಂಗಳೂರಿನ ತಲಪಾಡಿ ನಿವಾಸಿ ತಕ್ಷೀತ್ ( 32), ಮಂಗಳೂರು ನಗರದ ಶಕ್ತಿನಗರದ ರೋಶನ್ ಪ್ರಶಾಂತ್ (38) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಮಂಜೇಶ್ವರದ ಗಣೇಶ್ ಎಂಬವರ ಮಾರ್ಗದರ್ಶನದಂತೆ ಮಟ್ಕಾ ಜುಗಾರಿ ಆಟವನ್ನು ಆಡಿಸುತ್ತಿದ್ದರು ಎನ್ನಲಾಗಿದೆ. ಬಂಧಿತ ಆರೋಪಿ ತಕ್ಷಿತ್​ನಿಂದ 2500 ರೂಪಾಯಿ ಹಾಗೂ ರೋಷನ್ ಪ್ರಶಾಂತ್ ನಿಂದ 8000 ರೂಪಾಯಿ, ಒಟ್ಟು 10,500 ರೂಪಾಯಿ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್, ಖಾಲಿ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Tumkuru crime: ವಿದೇಶಿ ಪ್ರಜೆಗಳಿಂದ ಸಮಾಜ ಕಲ್ಯಾಣ ಅಧಿಕಾರಿ, ಪೊಲೀಸರು ಹಾಗೂ ನಿರಾಶ್ರಿತ ಕೇಂದ್ರದ ಸಿಬ್ಬಂದಿ ಮೇಲೆ ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.