ETV Bharat / state

ಬೆಳ್ತಂಗಡಿಯ ಶಿಕ್ಷಕ ಯಾಕೂಬ್​ಗೆ ರಾಷ್ಟ್ರ ಪ್ರಶಸ್ತಿ ಪ್ರದಾನ - Best Teacher Award for yakub

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಶಿಕ್ಷಕ ಯಾಕೂಬ್ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ವಿತರಿಸಲಾಯಿತು.

dsd
ಶಿಕ್ಷಕ ಯಾಕೂಬ್​ಗೆ ಉತ್ತಮ ಶಿಕ್ಷಕ ರಾಷ್ಟ್ರಪ್ರಶಸ್ತಿ ಪ್ರದಾನ!
author img

By

Published : Sep 6, 2020, 12:17 PM IST

ಮಂಗಳೂರು: ಬೆಳ್ತಂಗಡಿ ತಾಲೂಕಿನ ನಡ ಸರ್ಕಾರಿ ಶಾಲೆಯ ಶಿಕ್ಷಕ ಯಾಕೂಬ್ ಕೊಯ್ಯೂರುಗೆ ವರ್ಚುವಲ್ ಕಾರ್ಯಕ್ರಮದ ಮೂಲಕ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಿಲ್ಲಾ ಪಂಚಾಯತ್ ವಿಡಿಯೋ ಕಾನ್ಫೆರೆನ್ಸ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರ್ರಪತಿ ರಾಮನಾಥ್​ ಕೋವಿಂದ್ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೇಂದ್ರ ಸರ್ಕಾರದ ಪರವಾಗಿ ಜಿಲ್ಲಾಧಿಕಾರಿ ಪ್ರಶಸ್ತಿ ವಿತರಿಸಿದರು. ಈ ಸಂದರ್ಭ ಯಾಕೂಬ್ ಅವರ ಸಾಧನೆಗಳ ಬಗ್ಗೆ ಕಿರುಚಿತ್ರ ಪ್ರದರ್ಶಿಸಲಾಯಿತು.

ರಾಜ್ಯದಲ್ಲೇ ಮೊದಲ ಬಾರಿಗೆ ಗಣಿತ ಪ್ರಯೋಗಾಲಯವನ್ನು ಶಿಕ್ಷಕ ಯಾಕೂಬ್ ಅವರು ನಡ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಗಣಿತವನ್ನು ಸುಲಭವಾಗಿ ಬೋಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಬೋಧನೆ, ಪ್ರಯೋಗ, ವಿಡಿಯೋಗಳನ್ನು ಹಂಚಿ ಪ್ರಶಂಸೆಗೆ ಪಾತ್ರವಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.