ಪುತ್ತೂರು: ಗ್ರಾಮ ಪಂಚಾಯಿತಿ ಚುನಾವಣಾ ಕಣ ರಂಗೇರುತ್ತಿದ್ದು, ಪಕ್ಷಾಂತರ ಪರ್ವವು ಜೋರಾಗಿ ನಡೆದಿದೆ.
ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದ ಅನಿತಾ ಕೂವೆಂಜ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಕಳೆದ ಭಾರಿಯ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬೆಟ್ಟಂಪಾಡಿ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಪರಾಜಿತಗೊಂಡಿದ್ದರು. ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಶಾಸಕ ಸಂಜೀವ ಮಠಂದೂರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರವರು ಪಕ್ಷದ ಶಾಲು ಹಾಕಿ ಅಭಿನಂದಿಸಿದರು.
ಈ ವೇಳೆ ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಮೀನಾಕ್ಷಿ ಮಂಜುನಾಥ, ಮಾಜಿ ಅಧ್ಯಕ್ಷ ಶಂಭು ಭಟ್, ಮಾಜಿ ಸದಸ್ಯ ಜಯರಾಮ ಪೂಜಾರಿ, ಬಿಜೆಪಿ ಯುವ ಮೊರ್ಚಾದ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ ಬಳೆಜ್ಜ, ನಗರ ಸಭಾ ಸದಸ್ಯ ಪಿ.ಜಿ ಜಗನ್ನಿವಾಸ ರಾವ್, ಬೆಟ್ಟಂಪಾಡಿ ಗ್ರಾ.ಪಂ. ಮಾಜಿ ಸದಸ್ಯರಾದ ರಮೇಶ್ ಶೆಟ್ಟಿ ಕೊಮ್ಮಂಡ, ಜಗನ್ನಾಥ ರೈ, ಚನಿಲ ತಿಮ್ಮಪ್ಪ ಶೆಟ್ಟಿ, ರಾಮದಾಸ್ ಹಾರಾಡಿ, ಸುರೇಶ್ ಆಳ್ವ, ಚಂದ್ರಶೇಖರ ರಾವ್ ಬಪ್ಪಳಿಗೆ ಮೊದಲಾದವರು ಉಪಸ್ಥಿತರಿದ್ದರು.