ETV Bharat / state

ದೇವರೇ ಕಾಪಾಡಪ್ಪಾ.. ಕುಕ್ಕೆ ಸುಬ್ರಹ್ಮಣ್ಯನ ಮೊರೆ ಹೋದ ಭೈರತಿ ಬಸವರಾಜು

ಕಾಂಗ್ರೆಸ್ ಪಕ್ಷದಿಂದ ಬಂದಿರುವ ಕಾರಣಕ್ಕಾಗಿ ಟಾರ್ಗೆಟ್ ಮಾಡಿ ರಾಜಕೀಯವಾಗಿ ಮುಗಿಸಲು ಈ ರೀತಿ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಲಾಗುತ್ತಿದೆ . ರಮೇಶ್ ಜಾರಕಿಹೊಳಿ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಭೈರತಿ ಬಸವರಾಜ್ ಹೇಳಿದರು.

Bhairati Basavaraju visits to Subramanya
ಕುಕ್ಕೆ ಸುಬ್ರಹ್ಮಣ್ಯನ ಮೊರೆ ಹೋದ ಸಚಿವ ಭೈರತಿ ಬಸವರಾಜು
author img

By

Published : Mar 6, 2021, 7:53 PM IST

ಮಂಗಳೂರು: ಮುಂಬೈ‌ನಲ್ಲಿ ಏ‌ನೂ ನಡೆದಿಲ್ಲ, ಏನಾದರೂ ಇದ್ದರೆ ಬಿಡುಗಡೆ ಮಾಡಲಿ ಎಂದು ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯನ ಮೊರೆ ಹೋದ ಸಚಿವ ಭೈರತಿ ಬಸವರಾಜು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಮ್ಮ ಮೇಲೆ ಷಡ್ಯಂತ್ರ ನಡೆಯುತ್ತಿದೆ ಎಂಬ ಗುಮಾನಿಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯಕ್ಕೆ ಹೋಗಬಾರದು ಎಂದೇನಾದರೂ ಇದೆಯಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದಿಂದ ಬಂದಿರುವ ಕಾರಣಕ್ಕಾಗಿ ಟಾರ್ಗೆಟ್ ಮಾಡಿ ರಾಜಕೀಯವಾಗಿ ಮುಗಿಸಲು ಈ ರೀತಿ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಲಾಗುತ್ತಿದೆ . ರಮೇಶ್ ಜಾರಕಿಹೊಳಿ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದರು.

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿದ ಅವರು ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಕರ್ನಾಟಕ ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಸಚಿವ ಭೈರತಿ ಬಸವರಾಜುಗೆ ಸಾಥ್​ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆಯಲಿರುವ ಸಚಿವರು ಅಲ್ಲೇ ವಾಸ್ತವ್ಯ ಹೂಡಿ ನಾಳೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.