ಬಂಟ್ವಾಳ: ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ದ.ಕ.ಜಿಲ್ಲಾ ಸಹಕಾರ ಭಾರತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಸಹಭಾಗಿತ್ವದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮವು ಕಲ್ಲಡ್ಕ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು.
ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂತಹ ಉದ್ಯೋಗ ತರಬೇತಿ ಶಿಬಿರಗಳ ಮೂಲಕ ಪ್ರಧಾನಿ ಮೋದಿಯವರ ಆತ್ಮನಿರ್ಭರ ಭಾರತದ ಕನಸು ನನಸು ಮಾಡಲು ಯುವಕರು ಮನಸ್ಸು ಮಾಡಿ ಎಂದರು.
ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ಪಿ.ಎಸ್, ಮುರಳೀಧರ, ಶ್ರೀರಾಮ ಮಂದಿರದ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಶ್ರೀರಾಮ ಸೊಸೈಟಿಯ ಉಪಾಧ್ಯಕ್ಷ ಸುಜಿತ್ ಕೊಟ್ಟಾರಿ ಮುಂತಾದವರು ಉಪಸ್ಥಿತರಿದ್ದರು. ಹೈನುಗಾರಿಕೆ, ಕೃಷಿ ಯಂತ್ರೋಪಕರಣ ಬಳಕೆ ಮತ್ತು ದುರಸ್ತಿ ಕುರಿತು ತರಬೇತಿ ನೀಡಲಾಯಿತು.