ಬೆಳ್ತಂಗಡಿ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೀಟ್ ಕಾಡಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ತೋಟತ್ತಾಡಿ ಸಮೀಪದ ಕುತ್ರಿಜಾಲ್ ನಿವಾಸಿ ಸುದೀಪ್ ಭಂಡಾರಿ ( 30) ಎಂದು ಗುರುತಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.