ಬಂಟ್ವಾಳ: ಇಲ್ಲಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೇಲ್ಕಾರ್ನ ಜಂಕ್ಷನ್ನಲ್ಲಿ ಲಾರಿಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳೀಯ ಸರ್ವೀಸ್ ಸ್ಟೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಗಣೇಶ್ (36) ಎಂಬುವರೆ ಮೃತಪಟ್ಟವ.
ಮಂಗಳವಾರ ರಾತ್ರಿ 12 ಗಂಟೆ ವೇಳೆಗೆ ಘಟನೆ ಸಂಭವಿಸಿದೆ. ಮಾರ್ನಬೈಲ್ ಸರ್ವೀಸ್ ಸ್ಟೇಷನ್ನಲ್ಲಿ ದುಡಿಯುತ್ತಿದ್ದ ಗಣೇಶ್ ಬೈಕ್ನ್ನು ಕೊಣಾಜೆ ಕಡೆ ತಿರುಗಿಸುತ್ತಿದ್ದ ಸಂದರ್ಭದಲ್ಲಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಬೈಕ್ಗೆ ಲಾರಿ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದರೂ ಕೂಡ ಸಾಧ್ಯವಾಗಿಲ್ಲ, ಈ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನೆ ನಡೆದ ಕೂಡಲೇ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ದೆವ್ವ ಭಯದಲ್ಲಿ ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್‌ಟೇಬಲ್: ಕನಸಲ್ಲಿ ಬರ್ತಿತ್ತಂತೆ ಹೆಣ್ಣಿನ ಆತ್ಮ