ETV Bharat / state

ಮಾಣಿ ಗ್ರಾಮಕ್ಕೆ 2 ವರ್ಷಗಳಲ್ಲಿ 2 ಕೋಟಿ ರೂ. ಅನುದಾನ : ರಾಜೇಶ್ ನಾಯ್ಕ್

ತಾಲೂಕಿನ ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಕುಟುಂಬ ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭಾಗವಹಿಸಿದ್ದರು.

Bantvala
Bantvala
author img

By

Published : Oct 11, 2020, 5:28 PM IST

ಬಂಟ್ವಾಳ: ಮಾಣಿ ಗ್ರಾಮಕ್ಕೆ ಶಾಸಕನಾಗಿ 2 ವರ್ಷಗಳಲ್ಲಿ 2 ಕೋಟಿ ರೂ ಅನುದಾನ ಒದಗಿಸಲಾಗಿದ್ದು, ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಣಿ ಮಹಾಶಕ್ತಿ ಕೇಂದ್ರದ ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಕುಟುಂಬ ಮಿಲನ ಕಾರ್ಯಕ್ರಮ ಬದಿಗುಡ್ಡೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು.

ಮಾಣಿ ಪಂಚಾಯಿತಿಗೆ ಮೋದಿ ಸರ್ಕಾರ 14 ಮತ್ತು 15 ಹಣಕಾಸು ಯೋಜನೆಯಡಿ ನೇರ ಅನುದಾನ ನೀಡುವ ಮೂಲಕ ಗ್ರಾಮೀಣಾಭಿವೃದ್ಧಿಗೆ ಮಹತ್ತರವಾದ ಕೊಡುಗೆ ನೀಡಿದ್ದಾರೆ. ಮಾಣಿ ಗ್ರಾಮಕ್ಕೆ ಶಾಸಕನಾಗಿ 2 ವರ್ಷದಲ್ಲಿ 2 ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದು, ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ. ಗ್ರಾಮದಲ್ಲಿ ಕೇಂದ್ರ ಸರ್ಕಾರದ ಕೃಷಿ ಸಮ್ಮಾನ್ ಯೋಜನೆಯಡಿ 416 ಫಲಾನುಭವಿಗಳಿದ್ದು, ವಾರ್ಷಿಕವಾಗಿ ತಲಾ 10,000ದಂತೆ ಸಹಾಯಧನ ಪಡೆಯುತ್ತಿದ್ದಾರೆ ಎಂದರು.

ಇತ್ತೀಚೆಗೆ ನಡೆದ ಆಯುಷ್ಮಾನ್ ಕಾರ್ಡ್ ಅಭಿಯಾನದಲ್ಲಿ 1,200 ಜನರಿಗೆ ಉಚಿತ ಕಾರ್ಡ್ ನ್ನು ವಿತರಿಸಲಾಗಿದೆ. ಮುಂದಿನ ಪಂಚಾಯತ್ ಚುನಾವಣೆಯಲ್ಲಿ ಮಾಣಿಯಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಾಜಕಾರಣವನ್ನು ಜನತೆ ಬೆಂಬಲಿಸುವಂತೆ ಕರೆ ನೀಡಿದರು.

ಈ ವೇಳೆ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ರಾದ ಹರಿಕೃಷ್ಣ ಬಂಟ್ವಾಳ್, ಒಳಚರಂಡಿ ಮತ್ತು ನೀರು ಸರಬರಾಜು ಮಂಡಳಿಯ ನಿರ್ದೇಶಕಿ ಸುಲೋಚನ ಜಿ.ಕೆ ಭಟ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ವಿಟ್ಲಪಡ್ನೂರು, ಡೊಂಬಯ ಅರಳ ಪ್ರಮುಖರಾದ ಗಣೇಶ್ ರೈ ಮಾಣಿ, ಪುಷ್ಪರಾಜ್ ಚೌಟ, ನಾರಾಯಣ ಶೆಟ್ಟಿ, ಹರೀಶ್ ಕುಲಾಲ್, ನಾರಾಯಣ ಭಟ್, ಮಹಾಬಲ ಚೌಟ ಮತ್ತು ಪ್ರಮುಖ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.