ಮಂಗಳೂರು : ದಕ್ಷಿಣ ವಿಧಾನಸಭಾ ಕ್ಷೇತ್ರದ 47ನೇ ಮಿಲಾಗ್ರಿಸ್ ವಾರ್ಡ್‌ನ ಬಿಜೆಪಿ ಕಾರ್ಯಕರ್ತರು ನಿನ್ನೆ ಮಂಗಳೂರಿನ ಅತ್ತಾವರ ಕಟ್ಟೆಯಿಂದ ಪೊಳಲಿ ಶ್ರೀಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡು ಹರಕೆಯನ್ನು ತೀರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಮ್ಮೆ ಸಂಸದರಾಗಿ ಪುನರಾಯ್ಕೆಗೊಂಡು, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಪೂರ್ಣ ಬಹುಮತ ದೊರೆತರೆ ಮಂಗಳೂರಿನಿಂದ ಪೊಳಲಿ ದೇವಸ್ಥಾನಕ್ಕೆ ಪಾದಯಾತ್ರೆ ಮಾಡುವುದಾಗಿ ಈ ಹಿಂದೆ ಮಾಡಿಕೊಂಡಿದ್ದ ಹರಕೆಯನ್ನು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಗೆ ಸಮರ್ಪಿಸಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಜೊತೆ ಶಾಸಕ ವೇದವ್ಯಾಸ ಕಾಮತ್, ಮಿಲಾಗ್ರಿಸ್ ವಾರ್ಡ್ ಅಧ್ಯಕ್ಷ ಮೋಹನ್ ಕೆ.ಪೂಜಾರಿ, ಕಾರ್ಯದರ್ಶಿ ಡೊನಾಲ್ಡ್ ಜೀವನ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದ್ದಾರೆ.