ETV Bharat / state

ಚುನಾವಣೆ ವೇಳೆ ತುಳು ಭಾಷೆ ಅಧಿಕೃತತೆ ಮಾತೆತ್ತಿ ಬಿಜೆಪಿ ಸರ್ಕಾರದಿಂದ ಜನರಿಗೆ ಮೋಸ: ಯು‌ ಟಿ ಖಾದರ್

ಇತ್ತೀಚೆಗೆ ರಾಜ್ಯ ಸರ್ಕಾರ ತುಳು ಭಾಷೆಯನ್ನು ಅಧಿಕೃತ ರಾಜ್ಯದ ಎರಡನೇ ಭಾಷೆಯನ್ನಾಗಿಸಲು ಅಧ್ಯಯನ ನಡೆಸಿ ವರದಿ ನೀಡುವಂತೆ ಸಮಿತಿ ರಚಿಸಿ ಸೂಚನೆ ನೀಡಿದೆ.

MLA U T Khadar
ಶಾಸಕ ಯು ಟಿ ಖಾದರ್​
author img

By

Published : Feb 6, 2023, 8:26 PM IST

ಶಾಸಕ ಯು ಟಿ ಖಾದರ್​

ಮಂಗಳೂರು: ಚುನಾವಣೆ ಬರುತ್ತಿರುವ ಸಂದರ್ಭದಲ್ಲಿ ತುಳುವರ ಆಕ್ರೋಶ ತಪ್ಪಿಸಲು ಬಿಜೆಪಿ ಸರ್ಕಾರ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಎರಡನೇ ಭಾಷೆಯನ್ನಾಗಿ ಘೋಷಣೆ ಮಾಡುವ ವಿಚಾರವನ್ನು ಮುಂದಿಟ್ಟುಕೊಂಡು ಮೋಸ ಮಾಡುತ್ತಿದೆ ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಮಾತನಾಡಿದ ಅವರು, ಅಧಿಕಾರ ಇಲ್ಲದೇ ಇದ್ದಾಗ ಈ ಬಗ್ಗೆ ಬೇಡಿಕೆಯನ್ನು ಬಿಜೆಪಿಯವರು ಇಟ್ಟಿದ್ದರು. ಬಿಜೆಪಿ ಶಾಸಕರು ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾದರೂ ತುಳುವನ್ನು ಎರಡನೇ ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಲಿಲ್ಲ. ಸರ್ಕಾರ ಅಧ್ಯಯನ ಸಮಿತಿ ಮಾಡಿರುವುದೇ ತುಳು ಭಾಷೆಗೆ ಮಾಡಿರುವ ಅವಮಾನ.‌ ಸಾವಿರಾರು ವರ್ಷಗಳ ಇತಿಹಾಸವಿರುವ ತುಳು ಭಾಷೆಗೆ ಅಧ್ಯಯನ ಮಾಡಿ ವರದಿ ಕೊಡುವ ಅವಶ್ಯಕತೆ ಏನಿದೆ. ಇದು ಜನರಿಗೆ ಮೋಸ ಮಾಡುವ ತಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿರಾಡಿ ಘಾಟ್​ನಲ್ಲಿ ಟನಲ್ ವಿಚಾರ - ತೇಪೆಯಾದರೂ ಹಾಕಲಿ: ಕೇಂದ್ರ ಬಜೆಟ್​ನಲ್ಲಿ ಕರಾವಳಿಗೆ ಒಂದೇ ಒಂದು ಅನುದಾನ ನೀಡಲಾಗಿಲ್ಲ. ಶಿರಾಡಿಗೆ ಸುರಂಗ ಮಾರ್ಗ ಎಂದು ಹಲವು ವರ್ಷಗಳಿಂದ ಹೇಳುತ್ತಿದ್ದರೂ, ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್​ನಲ್ಲಿ ಈ ಯೋಜನೆಗೆ ಹಣ ಇಟ್ಟಿಲ್ಲ. ರೈಲ್ವೆ ಪ್ರತ್ಯೇಕ ವಿಭಾಗ ಕೇಳಿದಾಗಲೂ ಸರ್ಕಾರದ ಸ್ಪಂದನೆಯಿಲ್ಲ.‌ ಬಂದರು, ರಸ್ತೆಗೆ ಯಾವ ಅನುದಾನವನ್ನೂ ಸರ್ಕಾರ ನೀಡಿಲ್ಲ. ಶಿರಾಡಿ ಘಾಟ್ ಬಗ್ಗೆ ಸರ್ಕಾರ ಸ್ಪಷ್ಟವಾಗಿ ಜನರಿಗೆ ಹೇಳಲಿ. ಟನಲ್ ಬೇಡ, ರಸ್ತೆಗೆ ತೇಪೆಯಾದರೂ ಹಾಕಲಿ ಎಂದು ಆಗ್ರಹಿಸಿದರು.

ಅಮಿತ್ ಷಾ ರೋಡ್ ಶೋ ವೇಳೆ ರಸ್ತೆಯ ಹೊಂಡ-ಗುಂಡಿಗಳ‌ನ್ನು ಲೆಕ್ಕ ಮಾಡಲಿ: ಫೆ.11ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಮಂಗಳೂರಿನಲ್ಲಿ ರೋಡ್ ಶೋ ಮಾಡುತ್ತಿದ್ದಾರೆ. ಅವರನ್ನು ಕರಾವಳಿಗೆ ಸ್ವಾಗತ ಮಾಡುತ್ತೇವೆ.‌ ರೋಡ್ ಶೋ ಮಾಡುವ ವೇಳೆ ಅವರು ರಸ್ತೆಯ ಹೊಂಡ - ಗುಂಡಿಗಳ‌ನ್ನು ಲೆಕ್ಕ ಮಾಡಲಿ. ಬೆಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ ಮಂಗಳೂರಿಗೆ ಬರುವಂತೆ ಮಾಡಿದರೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸೆಲ್ಯೂಟ್ ಹೊಡೆಯುತ್ತೇನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಎನ್ನುವ ತುಳು ಭಾಷಿಕರ ಹೋರಾಟ ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಲೇ ಇದೆ. ಇದರ ಜೊತೆಗೆ ತುಳು ಭಾಷೆಯನ್ನು ಎರಡನೇ ಅಧಿಕೃತ ರಾಜ್ಯ ಭಾಷೆಯಾಗಿ ಮಾಡಬೇಕು, ತುಳು ಭಾಷೆಗೆ ಒಂದು ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಹಲವು ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಮನವಿಯನ್ನು ಪರಿಗಣಿಸಿದ ರಾಜ್ಯ ಸರ್ಕಾರ ಇತ್ತೀಚೆಗೆ ರಾಜ್ಯ ಸರ್ಕಾರ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ರಾಜ್ಯ ಭಾಷೆಯಾಗಿ ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ನೀಡಲು ಡಾ. ಮೋಹನ್​ ಆಳ್ವಾ ನೇತೃತ್ವದ ಸಮಿತಿ ರಚಿಸಿ ಸೂಚನೆ ನೀಡಿತ್ತು.

ಈಗ ಇರುವ ನಿಯಮಗಳು ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಅದರ ಸಾಧಕ - ಬಾಧಕಗಳ ಅಧ್ಯಯನ ನಡೆಸಿ, ಸಮಿತಿ ವಾಸ್ತವಾಂಶದ ವರದಿಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರಾಜ್ಯ ಸರ್ಕಾರ ಸೂಚಿಸಿದೆ. ರಾಜ್ಯ ಸರ್ಕಾರ ಈ ಸೂಚನೆ ಹೊರಡಿಸಿದ ಬೆನ್ನಲ್ಲೆ ಕರಾವಳಿಯ ರಾಜಕಾರಣಿಗಳಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಸರ್ಕಾರದ ತೀರ್ಮಾನಕ್ಕೆ ಧನ್ಯವಾದಗಳನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನಕ್ಕೆ ಒತ್ತಾಯ : ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.