ಮಂಗಳೂರು: ರಾಜಕೀಯ ಕಾರ್ಯಕ್ರಮಗಳಲ್ಲಿ ಬ್ಯುಸಿ ಆಗಿರುವ ರಾಜಕಾರಣಿಗಳಿಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಸಮಯಾವಕಾಶ ಕಡಿಮೆ. ಇಂತಹ ಕೆಲಸದ ಒತ್ತಡದ ನಡುವೆ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಕ್ರಿಕೆಟ್ ಆಡಿದ ವಿಡಿಯೋ ವೈರಲ್ ಆಗಿದೆ.
ಮಂಗಳೂರು ನೆಹರು ಮೈದಾನದಲ್ಲಿ ಭಾನುವಾರ ವಿಶ್ವ ಗಾಣಿಗರ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಕ್ರಿಕೆಟ್ ಪಂದ್ಯಾಟದ ಉದ್ಘಾಟನೆಗೆ ಆಗಮಿಸಿದ್ದ ಶಾಸಕ ವೇದವ್ಯಾಸ ಕಾಮತ್ ಅವರು ನೇರ ಬ್ಯಾಟ್ ಹಿಡಿದು ಕ್ರಿಕೆಟ್ ಆಡಲು ನಿಂತುಕೊಂಡರು. ಮೊದಲಿನಿಂದಲೂ ಕ್ರಿಕೆಟ್ ಆಸಕ್ತಿಯಿರುವ ಶಾಸಕ ಕಾಮತ್ ಬಂದ ಪ್ರತಿ ಬೌಲಿಂಗ್ಗೂ ಬ್ಯಾಟ್ ಬೀಸಿದ್ದಾರೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.