ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಮೊದಲನೇ ಅಲೆಯ ಸಂದರ್ಭದಲ್ಲೂ ಕಟೀಲ್ ಅವರಿಗೆ ಕೋವಿಡ್ ತಗುಲಿದ್ದು, ಇದೀಗ ಎರಡನೇ ಬಾರಿಗೆ ಸೋಂಕು ಕಾಣಿಸಿಕೊಂಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು 'ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೇ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ತಿಳಿಸಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,79,723 ಮಂದಿಗೆ ಸೋಂಕು ತಗುಲಿದ್ದು, 146 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. 46,569 ಜನರು ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ. ಕೋವಿಡ್ ಹರಡುವಿಕೆಯ ಹಿನ್ನೆಲೆ ದೇಶದಲ್ಲಿ ಪಾಸಿಟಿವ್ ದರ ಶೇ. 13.29ಕ್ಕೆ ಏರಿದೆ. ಕೊರೊನಾ ತಡೆಗಟ್ಟಲು ಇಂದಿನಿಂದ ಹಿರಿಯ ನಾಗರಿಕರು ಹಾಗೂ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಇದನ್ನೂ ಓದಿ: 1.80 ಲಕ್ಷ ಸನಿಹಕ್ಕೆ ಬಂದ ಕೊರೊನಾ ಪ್ರಕರಣಗಳು.. ದೇಶದಲ್ಲಿ ಕೋವಿಡ್ ಆತಂಕ!