ETV Bharat / state

ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜೆ.ಪಿ.ನಡ್ಡಾ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

bjp-president-jp-nadda-visited-bjp-worker-praveen-nettars-home-in-sulya
ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ ಭೇಟಿ
author img

By

Published : Apr 30, 2023, 10:04 PM IST

Updated : Apr 30, 2023, 10:16 PM IST

ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜೆ.ಪಿ.ನಡ್ಡಾ

ಮಂಗಳೂರು (ದಕ್ಷಿಣ ಕನ್ನಡ): ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿದರು. ಸುಳ್ಯ ತಾಲೂಕಿನ ‌ಬೆಳ್ಳಾರೆಯ ನಿವಾಸಕ್ಕೆ ಆಗಮಿಸಿದ ಜೆ.ಪಿ‌.ನಡ್ಡಾ ಅವರನ್ನು ಪ್ರವೀಣ್ ಪೋಷಕರು ಮತ್ತು ಪತ್ನಿ ಹೂಗುಚ್ಛ ನೀಡಿ ಶಾಲು ಹೊದಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು.

ನಡ್ಡಾ ಅವರು ಮನೆಯ ಮುಂಭಾಗದಲ್ಲಿದ್ದ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಮನೆಯೊಳಗೆ ತೆರಳಿ ‌ಪ್ರವೀಣ್ ಪೋಷಕರು ಮತ್ತು ಪತ್ನಿ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಪಾನೀಯ ಸೇವಿಸಿ ಕುಟುಂಬಸ್ಥರ ಪರಿಚಯ ಮಾಡಿಕೊಂಡರು. ಇಡೀ ದೇಶ ಮತ್ತು ಪಕ್ಷ ನಿಮ್ಮ ಜೊತೆ ಇದೆ ಎಂದು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಡ್ಡಾ, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ತುಂಬಾ ದುಃಖದಾಯಕ ಘಟನೆ ನಡೆದು ಹೋಗಿತ್ತು. ಈ ಹತ್ಯೆಯ ಹಿಂದೆ ಪಿಎಫ್ಐ ಇದ್ದು, ಇದು ಖಂಡನೀಯ. ಘಟನೆ‌ ನಂತರ ಪಿಎಫ್​ಐ ಸಂಘಟನೆಯನ್ನು ನಿಷೇಧ ಮಾಡಲಾಯಿತು. ನಮ್ಮ ಸರ್ಕಾರ ನಿಷೇಧ ಮಾಡಿ ಎನ್ಐಎ ತನಿಖೆ ಮಾಡುತ್ತಿದೆ ಎಂದರು.

ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗುವವರೆಗೂ ನಾವು ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲು ಬಿಡಲ್ಲ. ಇಂತಹ ಮಾನಸಿಕತೆ ವಿರುದ್ದ ನಮ್ಮ ಹೋರಾಟ ನಿರ್ಣಾಯಕ ಘಟ್ಟದವರೆಗೂ ಮುಂದುವರೆಯಲಿದೆ. ನೆಟ್ಟಾರು ಕುಟುಂಬ ಸದಸ್ಯರ ಜೊತೆ ನಮ್ಮ ಸರ್ಕಾರ ಇರಲಿದೆ. ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.

ನಳಿನ್ ಕುಮಾರ್ ನೇತೃತ್ವದಲ್ಲಿ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಹೊಸ ಮನೆ ನಿರ್ಮಿಸಲಾಗಿದ್ದು, ಏ.27ರಂದು ಗೃಹ ಪ್ರವೇಶ ನಡೆದಿತ್ತು.

ಇದನ್ನೂ ಓದಿ : ನೆಟ್ಟಾರು ಕುಟುಂಬಕ್ಕೆ ನಿರ್ಮಿಸಿದ ಮನೆಯ ಗೃಹ ಪ್ರವೇಶ: ಪ್ರವೀಣ್ ನೆಟ್ಟಾರು ಪ್ರತಿಮೆ ಅನಾವರಣ

Last Updated : Apr 30, 2023, 10:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.