ETV Bharat / state

ದ.ಕ.ಜಿಲ್ಲೆಯಲ್ಲಿ ಬಿಜೆಪಿಯನ್ನು ಇನ್ನಷ್ಟು ವಿಸ್ತರಿಸಲು ಕಾರ್ಯಕರ್ತರಿಗೆ ನಳಿನ್ ಕರೆ - ಬಿಜೆಪಿಯ ದ.ಕ.ಜಿಲ್ಲಾ ಜನಪ್ರತಿನಿಧಿಗಳು

ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಆಳ್ವಿಕೆ ನಡೆಸುತ್ತಿದೆ. ಆದ್ದರಿಂದ ಕಾರ್ಯಕರ್ತರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಆದಷ್ಟು ಸರ್ಕಾರದ ಯೋಜನೆಗಳನ್ನು ತಳಮಟ್ಟದಲ್ಲಿರುವ ಸಾಮಾನ್ಯ ಜನರಿಗೆ ತಲುಪಿಸಬೇಕೆಂದು ಕಾರ್ಯಕರ್ತರಿಗೆ ನಳಿನ್ ಕರೆ ನೀಡಿದರು.

BJP President Nalin Kumar Kateel
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್
author img

By

Published : Aug 9, 2020, 7:00 PM IST

ಮಂಗಳೂರು: ಬಿಜೆಪಿ ಭದ್ರಕೋಟೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ವಿಸ್ತಾರವಾಗಿ, ತಳಮಟ್ಟದಿಂದ ಬಲಪಡಿಸಲು ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಕರೆ ನೀಡಿದರು.

BJP President Nalin Kumar Kateel
ಬಿಜೆಪಿಯ ದ.ಕ.ಜಿಲ್ಲಾ ಜನಪ್ರತಿನಿಧಿಗಳು, ಜಿಲ್ಲಾ ಘಟಕದ ಪದಾಧಿಕಾರಿಗಳ, ಕಾರ್ಯಕರ್ತರ ಸಭೆ

ಕಾವೂರಿನಲ್ಲಿ ಭಾನುವಾರ ನಡೆದ ಬಿಜೆಪಿಯ ದ.ಕ.ಜಿಲ್ಲಾ ಜನಪ್ರತಿನಿಧಿಗಳು, ಜಿಲ್ಲಾ ಘಟಕದ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಆಳ್ವಿಕೆ ನಡೆಸುತ್ತಿದೆ. ಆದ್ದರಿಂದ ಕಾರ್ಯಕರ್ತರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಆದಷ್ಟು ಸರ್ಕಾರದ ಯೋಜನೆಗಳನ್ನು ತಳಮಟ್ಟದಲ್ಲಿರುವ ಸಾಮಾನ್ಯ ಜನರಿಗೆ ತಲುಪಿಸಬೇಕು. ಈ ಮೂಲಕ ಜನರೊಂದಿಗೆ ಇದ್ದು, ಪಕ್ಷವನ್ನು ಇನ್ನಷ್ಟು ಬೆಳೆಸಬೇಕು. ಅಲ್ಲದೆ ಗ್ರಾಪಂ ಚುನಾವಣೆ ಸಮೀಪಿಸುತ್ತಿದ್ದು, ಪಕ್ಷ ಬಲವರ್ಧನೆಯ ಉತ್ತಮ ಅವಕಾಶ ಇದೆ. ಉತ್ತಮವಾಗಿ ಕೆಲಸ ಮಾಡಿ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ, ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‌ ಕುಮಾರ್, ಶಾಸಕರು, ಜಿಲ್ಲಾ ಘಟಕದ ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಘಟಕಗಳ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.