ETV Bharat / state

'ಡಿಕೆಶಿಯವರಿಗೆ ಕ್ವಾರಂಟೈನ್ ನಿಯಮ ಅನ್ವಯಿಸುವುದಿಲ್ಲವೇ ?'

ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶ ಕೈಗೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೊತೆ ಸುತ್ತಾಡಿದ ಡಿಸೋಜ ಅವರಿಗೆ ಕೊರೊನಾ ದೃಢ ಪಟ್ಟಿದೆ. ಇವರ ಸಂಪರ್ಕದಲ್ಲಿದ್ದ ಕಾಂಗ್ರೆಸ್​ ನಾಯಕರಿಗೆ ಕ್ವಾರಂಟೈನ್​ ಯಾವಾಗ ಎಂದು ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್​ ಕಿಡಿಕಾರಿದ್ದಾರೆ.

BJP spokesperson Karnik
ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್
author img

By

Published : Aug 2, 2020, 11:23 PM IST

ಮಂಗಳೂರು: ಜು.31ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅವರೊಂದಿಗೆ ವಿಧಾನ ಪರಿಷತ್ ಮಾಜಿ ಸಚಿವ ಡಿಸೋಜ ಭಾಗವಹಿಸಿದ್ದರು. ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರೊಂದಿಗೆ ಸಂಪರ್ಕದಲ್ಲಿದ್ದ ಕಾಂಗ್ರೆಸ್ ನಾಯಕರಿಗೆ​ ಕ್ವಾರಂಟೈನ್ ನಿಯಮ ಅನ್ವಯಿಸುವುದಿಲ್ಲವೇ ಎಂದು ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಪ್ರಶ್ನಿಸಿದ್ದಾರೆ.

BJP spokesperson Karnik
ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್

ಜು.31ರ ಸಂಜೆ ಡಿಸೋಜ ಗಂಟಲು ದ್ರವ ಪರೀಕ್ಷೆಗೆ ಒಳಗಾಗಿದ್ದರು. ಆ.1ರಂದು ಅವರಿಗೆ ಸೋಂಕು ದೃಢಪಟ್ಟಿದೆ. ಈ ಕುರಿತು ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ.

ಹಾಗಾದರೆ ಕಾಂಗ್ರೆಸ್ ನಾಯಕರು ಯಾವಾಗ ಕ್ವಾರಂಟೈನ್ ಆಗುತ್ತಾರೆ? ಇವರಿಗೆ ಈ ನೆಲದ ಕಾನೂನು ಅನ್ವಯವಾಗುವುದಿಲ್ಲವೆ? ಕ್ವಾರಂಟೈನ್ ನಿಯಮಗಳಿಂದ ಕಾಂಗ್ರೆಸ್ ನಾಯಕರಿಗೆ ವಿನಾಯಿತಿ ಇದೆಯೇ? ಎಂಬುದನ್ನು ಕಾಂಗ್ರೆಸ್ ನಾಯಕರು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಕಿಡಿಕಾರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.