ETV Bharat / state

ವಲಸೆ ಕಾರ್ಮಿಕರಾಗಿ ಬಂದವರು ಗ್ರಾಮ ಪಂಚಾಯತ್ ಸದಸ್ಯೆಯಾಗಿ ಆಯ್ಕೆ

ವಲಸೆ ಕಾರ್ಮಿಕರಾಗಿ ಉಳ್ಳಾಲ ನಗರದ ಇನೋಳಿಗೆ ಬಂದಿದ್ದ ಮಮತಾ ಎಂಬುವವರು ಪಾವೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾದ್ದಾರೆ.

ullala
ಮಮತಾ
author img

By

Published : Dec 31, 2020, 11:05 AM IST

ಉಳ್ಳಾಲ: ಉಡುಪಿಯಿಂದ ವಲಸೆ ಕಾರ್ಮಿಕರಾಗಿ ಇನೋಳಿಗೆ ಬಂದಿದ್ದವರು ಇಂದು ಪಾವೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾದ್ದಾರೆ.

ಮಮತ ಎಂಬುವವರು ಪಾವೂರು ಗ್ರಾಪಂ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾದ್ದಾರೆ. ಇವರು ಮೊರಾರ್ಜಿ ದೇಸಾಯಿ ವಿದ್ಯಾಸಂಸ್ಥೆಯಲ್ಲಿ ಪ್ರೌಢ ಶಿಕ್ಷಣ, ದೇರಳಕಟ್ಟೆ ಮೊರಾರ್ಜಿ ದೇಸಾಯಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಿಯುಸಿ ಪಾಸಾಗಿದ್ದರು. ನಂತರ ಮಂಗಳೂರಿನ ಕೊಲಾಸೋ ವಿದ್ಯಾಸಂಸ್ಥೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಡಿಪ್ಲೊಮಾ ಪದವಿ ಪೂರೈಸಿದ್ದರು.

ಕೊಳಗೇರಿಯಲ್ಲಿದ್ದು ಮೆಡಿಕಲ್ ಬಿಎಸ್ಸಿ ಪದವಿ

ಉನ್ನತ ಶಿಕ್ಷಣ ಪಡೆಯಬೇಕೆಂಬ ಆಸೆಯಿಂದ ಸ್ಥಳೀಯ ಪತ್ರಕರ್ತರ ಹಾಗೂ ದಾನಿಗಳ ಸಹಕಾರದಿಂದ ಬೆಂಗಳೂರಿಗೆ ಆಗಮಿಸಿದ ಮಮತ 4 ವರ್ಷಗಳ ಕಾಲ ಬೆಂಗಳೂರು ನಗರದಲ್ಲಿರುವ ಬೆಂಗಳೂರು ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, 2020ರಲ್ಲಿ ಮೆಡಿಕಲ್ ವಿಭಾಗದಲ್ಲಿ ಬಿಎಸ್​ಸಿ ಪದವೀಧರೆಯಾಗಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದರು.

ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಶಿಕ್ಷಣ ಪಡೆಯುವ ಸಾವಿರಾರು ವಿದ್ಯಾರ್ಥಿಗಳ ಮಧ್ಯೆ ಬೆಂಗಳೂರಿನ ಆನೆಪಾಳ್ಯ ಎಂಬ ಕೊಳೆಗೇರಿ ಪ್ರದೇಶದಲ್ಲೇ ವಾಸಿಸುತ್ತಲೇ ಮಮತಾ ಅವರು ಮೆಡಿಕಲ್ ಬಿಎಸ್​ಸಿ ಪದವೀಧರೆಯಾಗಿದ್ದಾರೆ ಎಂಬುವುದೇ ವಿಶೇಷ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.