ಪುತ್ತೂರು (ದ.ಕ): ಕಳೆದೊಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವ ಬಿಜೆಪಿ ಮುಖಂಡ, ಜಿ.ಪಂ ಮಾಜಿ ಸದಸ್ಯ, ಧಾರ್ಮಿಕ, ಸಾಮಾಜಿಕ ಮುಂದಾಳು, ಪೊಯಿಲ ಕೇಶವಗೌಡ ಬಜತ್ತೂರು ಇಂದು ಬೆಳಿಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರಿಗೆ 45 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಪುಷ್ಪಾ, ಪುತ್ರ ಅಭಿಷೇಕ್ ಪುತ್ರಿ ಅನನ್ಯಾ ಹಾಗೂ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.
2019ರ ಲೋಕಸಭಾ ಚುನಾವಣೆಯವರೆಗೂ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಅವರು, ಬಳಿಕ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಮತದಾನದ ದಿನದವರೆಗೂ ಕರ್ತವ್ಯ ನಿರ್ವಹಿಸಿದ್ದರು.