ETV Bharat / state

ದ.ಕ. ಜಿಲ್ಲೆಯಲ್ಲಿ ಬಿಜೆಪಿಯ ರಾಜಕೀಯ ಶಕ್ತಿ ಆಳವಾಗಿ ಬೇರು ಬಿಟ್ಟಿದೆ: ಸಚಿವ ಮಾಧುಸ್ವಾಮಿ - BJP's political power is deeply rooted in Dakshina kannada district: Minister Madhuswamy

ಪುತ್ತೂರು ಮಂಡಲ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಸಚಿವ ಮಾಧುಸ್ವಾಮಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದಾರೆ .

Minister Madhuswamy
ದ.ಕ. ಜಿಲ್ಲೆಯಲ್ಲಿ ಬಿಜೆಪಿಯ ರಾಜಕೀಯ ಶಕ್ತಿ ಆಳವಾಗಿ ಬೇರು ಬಿಟ್ಟಿದೆ: ಸಚಿವ ಮಾಧುಸ್ವಾಮಿ
author img

By

Published : Dec 8, 2019, 4:29 AM IST

ಪುತ್ತೂರು:ಸಾಮಾನ್ಯ ಕಾರ್ಯಕರ್ತ ಕೂಡಾ ಶಾಸಕನಾಗಲು, ಸಚಿವನಾಗಲು, ಮುಖ್ಯಮಂತ್ರಿಯಾಗಲು, ಪ್ರಧಾನಮಂತ್ರಿಯಾಗಲು ಅವಕಾಶವಿರುವ ಏಕೈಕ ಪಕ್ಷ ಬಿಜೆಪಿ. ಬಿಜೆಪಿಯ ಕಾರ್ಯಕರ್ತರು ಸಂಘಟನೆಯ ಜೀವಾಳವಾಗಿದ್ದಾರೆ ಎಂದು ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಬಿಜೆಪಿಯ ಕಾರ್ಯಕರ್ತರ ಸಭೆ

ಶನಿವಾರ ಪುತ್ತೂರು ಮಂಡಲ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷ ಸಂಘಟನೆ ಮತ್ತು ಎಲ್ಲಾ ಹಂತಗಳಲ್ಲೂ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ ಸಾಧಿಸಿರುವ ಕುರಿತು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗು ಇಲ್ಲಿಯ ಕಾರ್ಯ ವಿಧಾನಗಳ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು.

ಸಂಘ ಪರಿವಾರದ ಶಕ್ತಿ ಕೇಂದ್ರವಾದ ದ.ಕ. ಜಿಲ್ಲೆಯಲ್ಲಿ ಬಿಜೆಪಿಯ ಸಂಘಟನೆ ಮತ್ತು ರಾಜಕೀಯ ಸಾಧನೆ ದೇಶಕ್ಕೆ ಮಾದರಿಯಾಗಿದೆ. ಜನಸಂಘ ಕಾಲದಿಂದಲೂ ಹಲವು ಹೋರಾಟಗಳನ್ನು ನಡೆಸಿ ಬಿಜೆಪಿ ಇಂದು ಮತದಾರರಿಂದ ಮನ್ನಣೆ ಪಡೆದಿದೆ. ರಾಜ್ಯ ಅಥವಾ ರಾಷ್ಟ್ರ ಮಟ್ಟದಲ್ಲಿ ಪಕ್ಷದ ಕುರಿತು ಚರ್ಚೆಗಳು ನಡೆಯುವ ಸಂದರ್ಭ ದ.ಕ. ಜಿಲ್ಲೆಯನ್ನು ಉದಾಹರಿಸಿ ರಾಷ್ಟ್ರೀಯ ನಾಯಕರು ಮಾತನಾಡುತ್ತಾರೆ. ದ.ಕ. ಜಿಲ್ಲೆಯಲ್ಲಿ ಬಿಜೆಪಿಯ ರಾಜಕೀಯ ಶಕ್ತಿ ಆಳವಾಗಿ ಬೇರು ಬಿಟ್ಟಿದೆ ಎಂದರು.

Intro:Body:ಪುತ್ತೂರು:
ರಾಷ್ಟ್ರೀಯ ಪಕ್ಷವಾದ ಬಿಜೆಪಿಯು ತಳಮಟ್ಟದ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಪರಿಶ್ರಮದಿಂದ ಬೆಳೆದಿದೆ. ಇಂದು ರಾಷ್ಟ್ರವ್ಯಾಪಿ ತನ್ನ ರಾಜಕೀಯ ಪ್ರಭಾವ ಮತ್ತು ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಿದೆ. ಸಾಮಾನ್ಯ ಕಾರ್ಯಕರ್ತ ಕೂಡಾ ಶಾಸಕನಾಗಲು, ಸಚಿವನಾಗಲು, ಮುಖ್ಯಮಂತ್ರಿಯಾಗಲು, ಪ್ರಧಾನಮಂತ್ರಿಯಾಗಲು ಅವಕಾಶವಿರುವ ಏಕೈಕ ಪಕ್ಷ ಬಿಜೆಪಿ. ಬಿಜೆಪಿಯ ಕಾರ್ಯಕರ್ತರು ಸಂಘಟನೆಯ ಜೀವಾಳವಾಗಿದ್ದಾರೆ ಎಂದು ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ಅವರು ಶನಿವಾರ ಪುತ್ತೂರು ಮಂಡಲ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಪಕ್ಷ ಸಂಘಟನೆ ಮತ್ತು ಎಲ್ಲಾ ಹಂತಗಳಲ್ಲೂ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ ಸಾಧಿಸಿರುವ ಕುರಿತು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗು ಇಲ್ಲಿಯ ಕಾರ್ಯ ವಿಧಾನಗಳ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು.
ಸಂಘ ಪರಿವಾರದ ಶಕ್ತಿ ಕೇಂದ್ರವಾದ ದ.ಕ. ಜಿಲ್ಲೆಯಲ್ಲಿ ಬಿಜೆಪಿಯ ಸಂಘಟನೆ ಮತ್ತು ರಾಜಕೀಯ ಸಾಧನೆ ದೇಶಕ್ಕೆ ಮಾದರಿಯಾಗಿದೆ. ಜನಸಂಘ ಕಾಲದಿಂದಲೂ ಹಲವು ಹೋರಾಟಗಳನ್ನು ನಡೆಸಿ ಬಿಜೆಪಿ ಇಂದು ಮತದಾರರಿಂದ ಮನ್ನಣೆ ಪಡೆದಿದೆ. ರಾಜ್ಯ ಅಥವಾ ರಾಷ್ಟ್ರ ಮಟ್ಟದಲ್ಲಿ ಪಕ್ಷದ ಕುರಿತು ಚರ್ಚೆಗಳು ನಡೆಯುವ ಸಂದರ್ಭ ದ.ಕ. ಜಿಲ್ಲೆಯನ್ನು ಉದಾಹರಿಸಿ ರಾಷ್ಟ್ರೀಯ ನಾಯಕರು ಮಾತನಾಡುತ್ತಾರೆ. ದ.ಕ. ಜಿಲ್ಲೆಯಲ್ಲಿ ಬಿಜೆಪಿಯ ರಾಜಕೀಯ ಶಕ್ತಿ ಆಳವಾಗಿ ಬೇರು ಬಿಟ್ಟಿದೆ ಎಂದರು.
ಸಚಿವರೊಂದಿಗೆ ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ ನಾಗೇಶ್ ಆಗಮಿಸಿದ್ದರು. ವೇದಿಕೆಯಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ , ಪುತ್ತೂರು ನಗರ ಮಂಡಲ ಬಿಜೆಪಿ ಅಧ್ಯಕ್ಷ ಕೆ. ಜೀವಂಧರ್ ಜೈನ್ . ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಾಮ್‌ದಾಸ್ ಹಾರಾಡಿ ಪುತ್ತೂರು ಶಾಸಕ ಸಂಜೀವ ಮಠಂದೂರು ಉಪಸ್ಥಿತರಿದ್ದರು. ಈ ಸಂದರ್ಭ ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ನಿಯೋಜಿತ ಅಧ್ಯಕ್ಷ ಕೆ. ರಾಧಾಕೃಷ್ಣ ಆಳ್ವ, ಪುತ್ತೂರು ನಗರ ಮಂಡಲ ನಿಯೋಜಿತ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ತಾಲೂಕು ಪಂಚಾಯತ್ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್, ನಗರಸಭಾ ಸದಸ್ಯರಾದ ವಿದ್ಯಾ ಆರ್. ಗೌರಿ, ಗೌರಿ ಬನ್ನೂರು, ಪ್ರೇಮಲತಾ ನಂದಿಲ, ಶಿವರಾಮ ಸಪಲ್ಯ, ಭಾಮಿ ಅಶೋಕ್ ಶೆಣೈ, ಪದ್ಮನಾಭ ನಾಯಕ್, ಮನೋಹರ್ ಕಲ್ಲಾರೆ ಬಿಜೆಪಿ ಪ್ರಮುಖರಾದ ಪುರುಷೋತ್ತಮ ಮುಂಗ್ಲಿಮನೆ, ಡಿ. ಶಂಭು ಭಟ್, ಗೋಪಾಲಕೃಷ್ಣ ಹೇರಳೆ, ಎಸ್. ಅಪ್ಪಯ್ಯ ಮಣಿಯಾಣಿ, ಆರ್.ಸಿ. ನಾರಾಯಣ, ಚಂದ್ರಶೇಖರ್ ರಾವ್ ಬಪ್ಪಳಿಗೆ ಮತ್ತಿತರರು ಉಪಸ್ಥಿತರಿದ್ದರು.

-------------------------------------------------------------Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.