ETV Bharat / state

ಬಿ.ಕೆ ಹರಿಪ್ರಸಾದ್​ಗೆ ಸಚಿವ ಸ್ಥಾನ ನೀಡದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ: ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ

author img

By

Published : Jul 2, 2023, 5:44 PM IST

ರಾಜಕೀಯವಾಗಿ ಬಿ ಕೆ ಹರಿಪ್ರಸಾದ್ ಅವರನ್ನು ಸಂಪೂರ್ಣವಾಗಿ ಹುನ್ನಾರ ನಡೆದಿದೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದರು.

ಪ್ರಣವಾನಂದ ಸ್ವಾಮೀಜಿ
ಪ್ರಣವಾನಂದ ಸ್ವಾಮೀಜಿ

ಬಂಟ್ವಾಳ (ದಕ್ಷಿಣ ಕನ್ನಡ) : ಬಿಲ್ಲವ ಸಮುದಾಯವನ್ನು ಅವಗಣನೆ ಮಾಡಿ ಟಾರ್ಗೆಟ್ ಮಾಡಿದ್ದಾರೆ. ಹೀಗೆಯಾದರೇ ರಾಜಕೀಯ ಪಕ್ಷಗಳು ಮುಂಬರುವ ಚುನಾವಣೆಗಳಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬ್ರಹ್ಮ ಶ್ರೀ ನಾರಾಯಣ ಗುರು ಶಕ್ತಿ ಪೀಠದ ಶ್ರೀ ಡಾ. ಪ್ರಣವಾನಂದ ಸ್ವಾಮೀಜಿ ಹೇಳಿದರು.

ಬಂಟ್ವಾಳದ ಮೆಲ್ಕಾರ್ ನ ಬಿರ್ವ ಸೆಂಟರ್​ನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ದೇಶದ 15 ರಾಜ್ಯಗಳಲ್ಲಿ ಬಿ.ಕೆ ಹರಿಪ್ರಸಾದ್ ಪ್ರಭಾರಿಗಳಾಗಿದ್ದಾರೆ. ಹರಿಪ್ರಸಾದ್ ಅವರು ಹಿಂದುಳಿದ ಸಮುದಾಯದ ನಾಯಕರಾಗಿದ್ದಾರೆ. ಹೀಗಾಗಿ ಅವರನ್ನು ರಾಜ್ಯ ಸರ್ಕಾರ ಮಂತ್ರಿಯನ್ನಾಗಿಸಬೇಕು. ಇಲ್ಲದಿದ್ದರೆ ಮುಂದಿನ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗು ಲೋಕಸಭಾ ಚುನಾವಣೆಗಳಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಿ ಕೆ ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಸಂಪೂರ್ಣವಾಗಿ ಮುಗಿಸಬೇಕು ಎಂಬ ಹುನ್ನಾರ ನಡೆದಿದೆ. ಜನಾರ್ದನ ಪೂಜಾರಿ ಅವರನ್ನು ಸೈಡ್ ಲೈನ್ ಮಾಡಿದಂತೆ ಹರಿಪ್ರಸಾದ್ ಅವರನ್ನೂ ಮೂಲೆಗುಂಪು ಮಾಡಲಾಗುತ್ತಿದೆ ಎಂದು ಶ್ರೀಗಳು ಆರೋಪಿಸಿದರು. ಚುನಾವಣೆ ಪೂರಕವಾಗಿ ರಾಜ್ಯ ಸರ್ಕಾರ ನೀವು ಘೋಷಿಸಿದಂತೆ 250 ಕೋಟಿ ರೂ. ಗಳನ್ನು ಇದೇ ತಿಂಗಳ 3 ರಂದು ನಡೆಯುವ ಬಜೆಟ್​ ನಲ್ಲಿ ನಿಗಮಕ್ಕೆ ಘೋಷಣೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಕಾನೂನಾತ್ಮಕ ವ್ಯವಸ್ಥೆ ಬುಡಮೇಲು ಮಾಡಲು ನಮ್ಮ ಯುವಕರು ಹೋಗದಂತೆ ಮಾಡಲು ಚಿಂತನೆ ನಡೆಸಲಾಗಿದೆ. ನಮ್ಮ ಸಮುದಾಯದ ಯುವಕರು ಪ್ರಕರಣಗಳನ್ನು ಮೈಮೇಲೆ ಎಳೆದುಕೊಳ್ಳಬಾರದು. ಬದುಕನ್ನು ಒತ್ತೆಯಿಟ್ಟು ಯಾರಿಗೋ ಕೆಲಸ ಮಾಡುವ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ : ರಾಜ್ಯ ಸರ್ಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ: ಸ್ವಾಮೀಜಿಗಳ ಧರ್ಮಸಭೆಯಲ್ಲಿ ನಿರ್ಧಾರ

ಬೆಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪುತ್ಥಳಿ ಅನಾವರಣ ಮಾಡಬೇಕು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನೀರಾ ಮತ್ತು ಶೇಂದಿ ಇಳಿಸುವ ಕುರಿತು ವ್ಯವಸ್ಥೆ ಕಲ್ಪಿಸಬೇಕು. ನಮಗೆ ಎಸ್.ಟಿ ಮೀಸಲಾತಿಯನ್ನು ನೀಡಬೇಕು. ಕೇರಳದಲ್ಲಿ ದೊಡ್ಡ ಪ್ರಮಾಣದ ಮೀಸಲಾತಿ ನಮ್ಮ ಸಮುದಾಯಕ್ಕಿದೆ. ಆದರೆ ಕರ್ನಾಟಕದಲ್ಲಿ ಇಲ್ಲ. ಹೀಗಾಗಿ ನಮ್ಮ ಸಮುದಾಯ ಎಸ್ ಟಿ ಮೀಸಲಾತಿಯನ್ನು ಪಡೆಯಲು ದೊಡ್ಡ ಮಟ್ಟದ ಹೋರಾಟ ಅವಶ್ಯಕತೆ ಇದೆ. ಹಿಂದಿನ ಬಿಜೆಪಿ ಸರ್ಕಾರ ನಾರಾಯಣಗುರು ನಿಗಮ ಘೋಷಣೆ ಮಾಡಿತ್ತು. ಇದೀಗ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ಅಧ್ಯಕ್ಷ, ಪದಾಧಿಕಾರಿಗಳನ್ನು ಘೋಷಣೆ ಮಾಡಬೇಕು ಎಂದು ಪ್ರಣವಾನಂದ ಸ್ವಾಮೀಜಿ ಒತ್ತಾಯಿಸಿದರು.

ಇನ್ನು ಈ ಸಂದರ್ಭದಲ್ಲಿ ರಾಜ್ಯ ಈಡಿಗ ಬಿಲ್ಲವ ಮಹಾಮಂಡಲಿಯ ಉಪಾಧ್ಯಕ್ಷ ಜಿತೇಂದ್ರ ಜೆ. ಸುವರ್ಣ, ಜಿಲ್ಲಾ ಗೌರವಾಧ್ಯಕ್ಷ ಸಂಜೀವ ಪೂಜಾರಿ, ಜಿಲ್ಲಾ ಅಧ್ಯಕ್ಷರಾಗಿ ಸುರೇಶ್ಚಂದ್ರ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಂಕರ ಸುವರ್ಣ, ಸಂಘಟನಾ ಕಾರ್ಯದರ್ಶಿಯಾಗಿ ಸತೀಶ್ ಬಾಯ್ಲ, ಮತ್ತು ಸುಂದರ ಪೂಜಾರಿ ಮತ್ತು ಜಯಶಂಕರ್ ಕಾನ್ಸಾಲೆ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.