ಮಂಗಳೂರು: ಮಂಗಳೂರಿನಲ್ಲಿ ನಡೆದ ಗೋಲಿಬಾರ್ನಲ್ಲಿ ಮೃತಪಟ್ಟ ಇಬ್ಬರ ಅಂತ್ಯಕ್ರಿಯೆ ನೆರವೇರಿದೆ.
ನಿನ್ನೆ ಮಂಗಳೂರಿನಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ನಡುವೆಯೂ ಪೌರತ್ವ ಕಾಯ್ದೆ ವಿರೋಧಿಸಿ ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಇಷ್ಟಾದರೂ ಪರಿಸ್ಥಿತಿ ಹತೋಟಿಗೆ ಬರದ ಪರಿಣಾಮ ಕರ್ಫ್ಯೂ ಜಾರಿ ಮಾಡಿ, ಕಂಡಲ್ಲಿ ಗುಂಡು ಆದೇಶ ಜಾರಿಯಾಗುತ್ತಿದ್ದಂತೆ ಇಬ್ಬರ ಮೇಲೆ ಪೊಲೀಸರು ಗುಂಡು ಹಾರಿಸಿದ್ದರು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು. ಇಂದು ಇಬ್ಬರ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯಿತು. ಬಳಿಕ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿತ್ತು.
ಇಬ್ಬರ ಅಂತ್ಯಕ್ರಿಯೆ ಜಮಾತ್ಗೆ ಸೇರಿದ ಮಸೀದಿಯಲ್ಲಿ ನೆರವೇರಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.