ಮಂಗಳೂರು : ಮಹೀಂದ್ರಾ ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ಉರುಳಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆ ಬಳಿ ನಡೆದಿದೆ.
ಹೊಸ್ಮಠ ಸೇತುವೆಯ ವೇಗ ನಿಯಂತ್ರಕವನ್ನು ದಾಟಿದ ಬೊಲೆರೋ ವಾಹನ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತೋಟಕ್ಕೆ ಉರುಳಿದೆ ಎನ್ನಲಾಗಿದೆ. ಈ ಘಟನೆಯಲ್ಲಿ ಬೊಲೆರೋ ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.