ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಆರೋಪಿ ಆದಿತ್ಯ ರಾವ್ನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಬೆಳ್ಳಿಯಪ್ಪ ನೇತೃತ್ವದ ಪೊಲೀಸರ ತಂಡ ನ್ಯಾಯಾಲಯಕ್ಕೆ ಇಂದು ಹಾಜರು ಪಡಿಸಿತು. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಡಿಸೆಂಬರ್ 23ರಂದು ಆರನೇ ಜೆಎಂಎಫ್ಸಿ ನ್ಯಾಯಾಲಯ ತನಿಖೆಗಾಗಿ ಆರೋಪಿ ಆದಿತ್ಯ ರಾವ್ನನ್ನು ಪೊಲೀಸ್ ವಶಕ್ಕೆ ಒಪ್ಪಿಸಿತ್ತು. ಇಂದು ಹತ್ತನೇ ದಿನವಾಗಿದ್ದು, ಆರೋಪಿಗೆ ಆರನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಕಿಶೋರ್ ಕುಮಾರ್ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ. ಪೊಲೀಸ್ ಕಸ್ಟಡಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿ ಆದಿತ್ಯ ರಾವ್ನನ್ನು ಜಿಲ್ಲಾ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಯಿತು.