ಬಂಟ್ವಾಳ: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕಳಾಯಿಯಲ್ಲಿ ನಡೆದಿದೆ.
ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬುವರ ಪುತ್ರ ಮಾಝಿನ್ (12) ಮೃತ ಬಾಲಕ ಎಂಬುದಾಗಿ ತಿಳಿದು ಬಂದಿದೆ. ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಾಝೀನ್ ಎಂಬ ಬಾಲಕನ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ತೀವ್ರ ಅಸ್ವಸ್ಥರಾಗಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.