ಮಂಗಳೂರು: ನಿಂತಿದ್ದ ಬಸ್ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ನಗರದ ಮಂಗಳಾದೇವಿ ದೇವಸ್ಥಾನದ ಬಳಿ ನಡೆದಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲೆಡೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹಾಗಾಗಿ, ಕಳೆದ ಕೆಲವು ದಿನಗಳಿಂದ ಬಸ್ ಅನ್ನು ದೇವಸ್ಥಾನದ ಬಳಿ ನಿಲ್ಲಿಸಲಾಗಿತ್ತು. ಆದರೆ, ಮುಂಜಾನೆ 3 ಗಂಟೆಯ ಹೊತ್ತಿಗೆ ಬಸ್ಗೆ ಏಕಾಏಕಿ ಬೆಂಕಿ ತಗುಲಿ ಹೊತ್ತಿ ಉರಿದಿದೆ.
ಇದನ್ನೂ ಓದಿ: ಮಂಗಳೂರು ಮುಕ್ಕ ಶ್ರೀನಿವಾಸ ಆಸ್ಪತ್ರೆ ಸಿಬ್ಬಂದಿ ಎಡವಟ್ಟು: ಶವ ಅದಲು ಬದಲು
ಈ ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪಾಂಡೇಶ್ವರ ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅಷ್ಟೊತ್ತಿಗಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗ್ತಿದೆ.